ಪದ್ಮಶ್ರೀ ಹರೇಕಳ ಹಾಜಬ್ಬರ ಮತದಾರರ ಪಟ್ಟಿ ಗೊಂದಲ ಇತ್ಯರ್ಥ: ಜಿಲ್ಲಾಧಿಕಾರಿ ಸ್ಪಷ್ಟನೆ

Picture of Savistara

Savistara

Bureau Report

ಮಂಗಳೂರು: ಮತದಾರರ ಪಟ್ಟಿಯಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ಹೆಸರು ವ್ಯತ್ಯಾಸವಾಗಿದ್ದ ಕಾರಣ ಚುನಾವಣಾ ಆಯೋಗದಿಂದ ನೋಟಿಸ್‌ ಜಾರಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧಿಕೃತ ಸ್ಪಷ್ಟನೆ ನೀಡಿದ್ದು ಸಮಸ್ಯೆ ಸಂಪೂರ್ಣವಾಗಿ ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಹೊಂದಾಣಿಕೆ ಆಗದಿರುವುದು ಕಂಡುಬಂದಿತ್ತು. ಅವರ ಹೆಸರನ್ನು ಸರಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಖುದ್ದು ಅವರ ಮನೆಗೆ ಭೇಟಿ ನೀಡಿ, ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಈ ಸಮಸ್ಯೆಯನ್ನು ಈಗ ಸಂಪೂರ್ಣವಾಗಿ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗೊಂದಲಕ್ಕೆ ತೆರೆ: ಮತದಾರರ ಪಟ್ಟಿಯ ಪರಿಶೀಲನೆ ವೇಳೆ ಹಳೆಯ ದಾಖಲೆಗಳಲ್ಲಿದ್ದ ‘ಹಾಜಬ್ಬ’ ಮತ್ತು ಪ್ರಸ್ತುತ ದಾಖಲೆಗಳಲ್ಲಿದ್ದ ‘ಹರೇಕಳ ಹಾಜಬ್ಬ’ ಹೆಸರಿನ ವ್ಯತ್ಯಾಸದಿಂದಾಗಿ ನೋಟಿಸ್‌ ಜಾರಿಯಾಗಿ ಚರ್ಚೆಗೆ ಕಾರಣವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಹಾಜಬ್ಬ ಅವರ ಮನೆಗೇ ತೆರಳಿ ತಮ್ಮಿಂದಾದ ತಪ್ಪನ್ನು ಸರಿಪಡಿಸಿದ್ದರು. ಇದೀಗ ಜಿಲ್ಲಾಡಳಿತವೇ ಅಧಿಕೃತ ಸ್ಪಷ್ಟನೆ ನೀಡುವ ಮೂಲಕ ಗೊಂದಲಕ್ಕೆ ಪೂರ್ಣವಿರಾಮ ಇಟ್ಟಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!