ಬಿಜೆಪಿ ಬಳ್ಳಾರಿ ಚಲೋ ಯಶಸ್ವಿ | ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿದ ಯಾತ್ರೆ,ನಾಯಕರ ಒಗ್ಗಟ್ಟು ಪ್ರದರ್ಶನ

Picture of Savistara

Savistara

Bureau Report

ಬಳ್ಳಾರಿ :ಲಿಂಗಸುಗೂರಿನಿಂದ 9 ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಿ ಬಂದ ಬಿಜೆಪಿಯ ಐತಿಹಾಸಿಕ ‘ಬಳ್ಳಾರಿ ಚಲೋ’ ಜನಾಂದೋಲನ ಪಾದಯಾತ್ರೆ ಇಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶದೊಂದಿಗೆ ಯಶಸ್ವಿಯಾಗಿ ಸಮಾಪ್ತಿಯಾಯಿತು.ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪಾದಯಾತ್ರೆ ಗಮ್ಯ ತಲುಪಿತು.

ಬಿಜೆಪಿ ಆರೋಪ:

ವಾಲ್ಮೀಕಿ ನಿಗಮದ ನೂರಾರು ಕೋಟಿ ಲೂಟಿ ಬಡವರ, ದಲಿತರ, ಶೋಷಿತರ ಹಕ್ಕು ಕಸಿದ ಅಕ್ಷಮ್ಯ ಅಪರಾಧ. ಇದಕ್ಕೆ ಭ್ರಷ್ಟ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ.

ಪ್ರಮುಖ ಬೇಡಿಕೆಗಳು:- ಲೂಟಿಯಾದ ಹಣ ವಾಪಸ್ ತಂದು ಶೋಷಿತರಿಗೆ ನೀಡಬೇಕು- SCP-TSP ಅನುದಾನ ದುರ್ಬಳಕೆ ನಿಲ್ಲಿಸಬೇಕು- ಕಲ್ಯಾಣ ಕರ್ನಾಟಕದ ಪ್ರತಿ ಕ್ಷೇತ್ರಕ್ಕೆ 200 ಕೋಟಿ ರೂ. ಅಭಿವೃದ್ಧಿ ಅನುದಾನ ನೀಡಬೇಕು

“ಜನವಿರೋಧಿ, ರೈತವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ಹೋರಾಟ ನಿಲ್ಲದು. ಶೋಷಿತರ ಹಣ ವಾಪಸ್ ಬರುವವರೆಗೂ ರಣಕಹಳೆ ಮುಂದುವರಿಯುತ್ತದೆ” ಎಂದು ನಾಯಕರು ಘೋಷಿಸಿದರು.

ಸಮಾರೋಪದಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್, ಬಿ.ಎಸ್.ಯಡಿಯೂರಪ್ಪ, ಪ್ರಲ್ಹಾದ್ ಜೋಶಿ, ಆರ್.ಅಶೋಕ, ಚಲವಾದಿ ನಾರಾಯಣಸ್ವಾಮಿ, ಬಸವರಾಜ ಬೊಮ್ಮಾಯಿ, ಸದಾನಂದ ಗೌಡ, ಗೋವಿಂದ ಕಾರಜೋಳ, ಸಿ.ಟಿ.ರವಿ, ಬಿ.ಶ್ರೀರಾಮುಲು, ಜನಾರ್ದನ ರೆಡ್ಡಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!