
ಸುಳ್ಯ: ನಗರದಲ್ಲಿ ಇಂದು ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಮಿಲಾದ್ ಮೆರವಣಿಗೆಯಿಂದ ನಗರದಲ್ಲಿ ಒಂದೂವರೆ ತಾಸು ಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಪರದಾಡಿದ ಘಟನೆ ನಡೆದಿದೆ.
ಸಂಜೆ 4.30 ಕ್ಕೆ ಹಳೆಗೇಟ್ ಬಳಿಯಿಂದ ಪ್ರಾರಂಭವಾದ ಮೆರವಣಿಗೆ ಗಾಂಧಿನಗರದವರೆಗೆ ಸಾಗಿ ಬಂದಿದ್ದು, ಮೆರವಣಿಗೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿದ್ದರು.ಸಂಜೆ ಹೊತ್ತಿನಲ್ಲಿ ಮೆರವಣಿಗೆ ಆಯೋಜಿಸಿದ್ದರಿಂದ ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ಉದ್ಯೋಗಿಗಳು, ಶಾಲಾ-ಕಾಲೇಜು ಮುಗಿಸಿ ಹೋಗುತ್ತಿದ್ದ ವಿದ್ಯಾರ್ಥಿಗಳು ಒಂದೂವರೆ ತಾಸು ಟ್ರಾಫಿಕ್‌ನಲ್ಲಿ ಸಿಲುಕಿ ತೀವ್ರ ತೊಂದರೆ ಅನುಭವಿಸಿದರು.
ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ಸಂಚಾರ ನಿಯಮವನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯಕ್ರಮ ನಿರ್ವಹಿಸಬೇಕೆಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.















































