ಸುಳ್ಯ:ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಸುಳ್ಯ ಮತ್ತು ಕಡಬ ತಾಲೂಕಿನ ಗ್ರಾಮೀಣ ಭಾಗದಲ್ಲಿ 23 ನೂತನ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ನಿರ್ಮಾಣಕ್ಕೆ ಚಾಲನೆ ಸಿಗಲಿದೆ.
ರೂ. 14.95 ಕೋಟಿ ಅನುದಾನ:ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಒಟ್ಟು ರೂ. 14.95 ಕೋಟಿ (1495 ಲಕ್ಷ) ಅನುದಾನದಲ್ಲಿ ಈ ಕಾಮಗಾರಿಗಳು ನಡೆಯಲಿದ್ದು, ಪ್ರತಿ ಕೇಂದ್ರಕ್ಕೆ ತಲಾ ರೂ. 65 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ.
ಸೆ.13 ರಂದು ಗುದ್ದಲಿಪೂಜೆ:*ಈ ಯೋಜನೆಯ ಮೊದಲ ಹಂತವಾಗಿ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಮತ್ತು ಆಲೆಟ್ಟಿ ಗ್ರಾಮಗಳಲ್ಲಿ ಕಾಮಗಾರಿಗೆ ಗುದ್ದಲಿಪೂಜೆ ಹಮ್ಮಿಕೊಳ್ಳಲಾಗಿದೆ.
ದಿನಾಂಕ: 13-09-2026, ಶನಿವಾರ ಮಧ್ಯಾಹ್ನ 2.00 ಗಂಟೆಗೆ – ಕಂದ್ರಪ್ಪಾಡಿ, ದೇವಚಳ್ಳ, ಸಂಜೆ 4.00 ಗಂಟೆಗೆ – ಆಲೆಟ್ಟಿ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ತರಲು ಶ್ರಮಿಸುತ್ತಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಗುದ್ದಲಿಪೂಜೆ ನೆರವೇರಿಸಲಿದ್ದು, ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಉಪಸ್ಥಿತರಿರಲಿದ್ದಾರೆ.
ಇದೇ ವೇದಿಕೆಯಿಂದ ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ 23 ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಗ್ರಾಮಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.















































