ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ-ಪ್ರಕರಣ ದಾಖಲು

Picture of Savistara

Savistara

Bureau Report

ಪುತ್ತೂರು:ಆ.31ರಂದು ಪುತ್ತೂರಿನಲ್ಲಿ ನಡೆದ ‘ಪುತ್ತೂರು ಚಲೋ’ ಕಾರ್ಯಕ್ರಮದ ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಕುರಿತು ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.ಆ.21ರಂದು ಪುತ್ತೂರಿನ ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯವರು ಆ.31ರಂದು ‘ಪುತ್ತೂರು ಚಲೋ’ ಕಾರ್ಯಕ್ರಮ ಆಯೋಜಿಸಿದ್ದರು. ದರ್ಬೆಯಿಂದ ವೆಂಕಟರಮಣ ದೇವಸ್ಥಾನದ ಕಡೆಗೆ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಕೆಲವರು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಪಾಕಿಸ್ತಾನ ಹಾಗೂ ಬಾಂಗ್ಲಾದೇಶಕ್ಕೆ ಹೋಲಿಸುವ ರೀತಿಯ ಘೋಷಣೆಗಳನ್ನು ಕೂಗಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.ಈ ಘೋಷಣೆಗಳ ವೀಡಿಯೊ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಬಳಿಕ ದೂರುದಾರರು ಪೊಲೀಸರಿಗೆ ದೂರು ನೀಡಿದ್ದು, ಮೆರವಣಿಗೆಯಲ್ಲಿ ಭಾಗವಹಿಸಿದವರು ಎರಡು ಅಥವಾ ಹೆಚ್ಚು ಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟುಮಾಡುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಘೋಷಣೆ ಕೂಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರು ಸ್ವೀಕರಿಸಿದ ಪೊಲೀಸರು ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧಿಕ್ಷಕರ ಅನುಮತಿ ಪಡೆದು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಘೋಷಣೆ ಕೂಗಿದವರಲ್ಲಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಬನದಬೈಲು ನಿವಾಸಿ ನಾಗೇಶ್ ಶ್ರೀನಿವಾಸ ಗೌಡ ಹಾಗೂ ಇತರರು ಸೇರಿರುವುದು ತಿಳಿದುಬಂದಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!