ಸುಳ್ಯ: ಸುಳ್ಯ ತಾಲೂಕಿನ ಆಲೆಟ್ಟಿಯ ಜನನಿ ಫ್ರೆಂಡ್ಸ್ ಕ್ಲಬ್ (ರಿ.) ಗುಂಡ್ಯ, ಆಲೆಟ್ಟಿ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ, ಆಲೆಟ್ಟಿ ಇದರ ಆಶ್ರಯದಲ್ಲಿ ನಡೆದ 4ನೇ ವರ್ಷದ ‘ಆಲೆಟ್ಟಿ ಮೊಸರು ಕುಡಿಕೆ ಉತ್ಸವ’ ವಿಜೃಂಭಣೆಯಿಂದ ನಡೆಯಿತು.

ಉತ್ಸವದ ಸಭಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪಾಲ್ಗೊಂಡು ಶುಭ ಹಾರೈಸಿದರು. ವೇದಿಕೆಯಲ್ಲಿ ವಜ್ರದೇಹಿ ಶ್ರೀ ರಾಜಶೇಖರನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕಿ ಭಾಗೀರಥಿ ಮುರುಳ್ಯ ಈ ವೇಳೆ ಉಪಸ್ಥಿತರಿದ್ದರು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಯೋಜಿಸಿದ್ದ ಈ ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ ಸಭಾ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಕ್ಲಬ್ ಪದಾಧಿಕಾರಿಗಳು, ಉತ್ಸವ ಸಮಿತಿ ಸದಸ್ಯರು ಹಾಗೂ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

















































