ಸುಳ್ಯದ ಆಲೆಟ್ಟಿ ಕೋಲ್ಚಾರಿನಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಶಿಲಾನ್ಯಾಸ

Picture of Savistara

Savistara

Bureau Report

ಸುಳ್ಯ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ PM-ABHIM ಯೋಜನೆಯಡಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರಿನಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಆಯುಷ್ಮಾನ್ ಆರೋಗ್ಯ ಮಂದಿರ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಯಿತು.

ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ,ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಒಟ್ಟು 33 ಆಯುಷ್ಮಾನ್ ಆರೋಗ್ಯ ಮಂದಿರಗಳು 21.45 ಕೋಟಿ ರೂ. ವೆಚ್ಚದಲ್ಲಿ ಮಂಜೂರಾಗಿದ್ದು, ಇದರಿಂದ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು,ಬಿಜೆಪಿ ಪ್ರಮುಖರು,ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

[t4b-ticker]
error: Content is protected !!