ಮಳೆಗೆ ಬೆಂಗಳೂರು ತತ್ತರ -ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

Picture of Savistara

Savistara

Bureau Report

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಭಾರೀ ಮಳೆ ಸುರಿದಿದ್ದು, ನಗರದ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ವಾಹನ ಸಂಚಾರಕ್ಕೂ ಅಡ್ಡಿಯುಂಟಾಗಿ, ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವಂತಾಯಿತು.

ಸಂಜೆ ವೇಳೆಗೆ ಏಕಾಏಕಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಹಲವು ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಧಾನಗೊಂಡು, ಕೆಲವೆಡೆ ವಾಹನಗಳ ಓಡಾಟಕ್ಕೂ ತೊಂದರೆಯಾಗಿದೆ.ಸೆಪ್ಟೆಂಬರ್ 15ರಂದು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಬೆಂಗಳೂರಿನಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯ ಸಾಧ್ಯತೆಯನ್ನೂ ಸೂಚಿಸಲಾಗಿತ್ತು.

ಇನ್ನೂ ಎರಡು ದಿನ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿಮುಂದಿನ ಎರಡು ದಿನಗಳಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ಹೀಗಾಗಿ ವಾಹನ ಸವಾರರು ತಗ್ಗು ಪ್ರದೇಶಗಳು, ಜಲಾವೃತ ರಸ್ತೆಗಳು ಹಾಗೂ ಸಂಚಾರ ದಟ್ಟಣೆ ಇರುವ ಮಾರ್ಗಗಳಲ್ಲಿ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.

[t4b-ticker]
error: Content is protected !!