ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಇಂದು ‘ಸೇವಾ ಸಂಕಲ್ಪ’ ಆಶಯದೊಂದಿಗೆ ವಿಶೇಷ ಪ್ರಾರ್ಥನೆ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ದೇವಾಲಯಕ್ಕೆ ಭೇಟಿ ನೀಡಿ ಪ್ರಧಾನಿಯವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ನಿರಂತರವಾಗಿ ರಾಷ್ಟ್ರಸೇವೆ ಮಾಡುವ ಶಕ್ತಿ ದೊರೆಯಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.

ಸಾರ್ವಜನಿಕ ಸೇವೆಯ 25ನೇ ವರ್ಷಕ್ಕೆ ಕಾಲಿಟ್ಟಿರುವ ಪ್ರಧಾನಿಯವರ ದೀರ್ಘಕಾಲದ ರಾಷ್ಟ್ರಸೇವಾ ಪಯಣಕ್ಕೆ ಗೌರವ ಸಲ್ಲಿಸಲಾಯಿತು.

‘ಜನಸೇವೆಯೇ ಜನಾರ್ದನ ಸೇವೆ’ ಎಂಬ ಭಾವನೆಯೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಅಭಿವೃದ್ಧಿ ಯೋಜನೆಯ ಪ್ರಯೋಜನಗಳನ್ನು ತಲುಪಿಸುವ ನಿಟ್ಟಿನಲ್ಲಿ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಹೋಗುವ ಸಂಕಲ್ಪ ಮಾಡಲಾಯಿತು.

















































