ಸುಳ್ಯದ ಶ್ರೀ ಪರಿವಾರ ಪಂಚಲಿಂಗೇಶ್ವರ ಸೀಮೆ ದೇವಸ್ಥಾನದಲ್ಲಿ ಇಂದು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಶತರುದ್ರಾಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರುತ್ತಿವೆ.ಈ ಪವಿತ್ರ ಕಾರ್ಯಕ್ರಮಕ್ಕಾಗಿ ಸುಮಾರು 1,200 ಎಳನೀರುಗಳ ಅಗತ್ಯವಿತ್ತು.
ಆದರೆ ಸೀಮೆಯ ಭಕ್ತಾದಿಗಳು ನಿರೀಕ್ಷೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಎಳನೀರು ಸಮರ್ಪಿಸುವ ಮೂಲಕ ತಮ್ಮ ಅಪಾರ ಭಕ್ತಿ ಹಾಗೂ ಸೇವಾ ಮನೋಭಾವವನ್ನು ಮೆರೆದಿದ್ದಾರೆ.
ಕಳೆದ 12 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಶಿವ ಪಂಚಾಕ್ಷರಿ ಜಪಾನುಷ್ಠಾನವು ಇಂದು “ಓಂ ನಮಃ ಶಿವಾಯ” ಮಂತ್ರ ಜಪದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಳ್ಳಲಿದೆ. ಪ್ರತಿಯೊಂದು ಗ್ರಾಮದ ಭಕ್ತರು ಕುಟುಂಬ ಸಮೇತರಾಗಿ ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡು ತೀರ್ಥ-ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಭಕ್ತ ವೃಂದ ಕೋರಿದೆ.
















































