ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ: ಸಿಎಂ ಘೋಷಣೆ

Picture of Savistara

Savistara

Bureau Report

ಮಂಗಳೂರು : ತುಳು ಭಾಷೆಗೆ ಕರ್ನಾಟಕದ ಎರಡನೇಅಧಿಕೃತ ಭಾಷೆಯ ಮಾನ್ಯತೆ ನೀಡುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದರು.ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಮತ್ತು ಅಧಿಕೃತ ಬಳಕೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಲಿದ್ದು, ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿವೆ ಎಂದು ಮುಖ್ಯಮಂತ್ರಿ ಹೇಳಿದರು.ಮಂಗಳೂರಿನಲ್ಲಿ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯ ಮಾನ್ಯತೆ ಕುರಿತು ಸಿಎಂ ಘೋಷಿಸಿದ್ದಾರೆ.

[t4b-ticker]
error: Content is protected !!