ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುತ್ತೂರು ಸೇರಿದಂತೆ ಕರಾವಳಿ ಭಾಗಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ₹579.49 ಕೋಟಿ ಅನುದಾನ ಘೋಷಿಸಿರುವ ಮುಖ್ಯಮಂತ್ರಿ, ಪುತ್ತೂರಿನ ವಿಟ್ಲ ನೀರಾವರಿ ಯೋಜನೆಗೆ ₹100 ಕೋಟಿ ಅನುದಾನ ನೀಡುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಶೇಷವಾಗಿ ₹5 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.
ಕರಾವಳಿಯ ಬಹುದಿನಗಳ ಬೇಡಿಕೆಗಳಲ್ಲಿ ಒಂದಾಗಿರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಈ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
















































