ಕೊಪ್ಪಳ: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಬೇಕೆಂಬ ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸಿ ಪೂರ್ಣ 6 ಚರಣ ಹಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಎಚ್ಚರಿಸಿದ್ದಾರೆ.ಗಂಗಾವತಿಯ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಶಾಸಕ ಜನಾರ್ದನ ರೆಡ್ಡಿ ಒತ್ತಡದ ಮೇರೆಗೆ ಪೂರ್ಣ ಗೀತೆ ಹಾಡಲಾಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. ಕೇಂದ್ರದ ಆದೇಶದಂತೆ 6 ಚರಣ ಹಾಡಬೇಕೆಂದು ಬಿಜೆಪಿ ಪಟ್ಟು ಹಿಡಿದರೆ, ರಾಜ್ಯದಲ್ಲಿ 2 ಚರಣ ಮಾತ್ರ ಹಾಡಬೇಕೆಂಬುದು ಸರ್ಕಾರದ ನಿಲುವು ಎಂದು ಸಚಿವರು ಸ್ಪಷ್ಟಪಡಿಸಿದರು.
ವಂದೇ ಮಾತರಂ ಪೂರ್ಣ ಹಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ತಂಗಡಗಿ ಎಚ್ಚರಿಕೆ
Savistara
Bureau Report
[t4b-ticker]
















































