ಕಾರ್ಕಳ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಭಾನುವಾರ ಕಾರ್ಕಳ ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ.
ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ರಮಾನಾಥ ರೈ ಸೇರಿದಂತೆ ಕಾರು ಹಾಗೂ ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಆದರೇ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಮೂಲಗಳು ತಿಳಿಸಿವೆ. ರೈವರ ಆಪ್ತ ಸಹಾಯಕ ಹಾಗೂ ಚಾಲಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ರೈಯವರು ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ
ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್‌ಬ್ಯಾಗ್‌ಗಳು ತೆಗೆದುಕೊಂಡಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಕಾರು ಸಂಪೂರ್ಣ ಜಖಂಗೊಂಡ ಕಾರಣ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ತಕ್ಷಣ ಸಾರ್ವಜನಿಕರು ಧಾವಿಸಿ ಅವರಿಬ್ಬರನ್ನು ಕಾರಿನಿಂದ ಹೊರತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.















































