WEATHER | ರಾಜ್ಯದಲ್ಲಿ ಮುಂಗಾರು ಚುರುಕು, ಇಂದು ಬೆಂಗಳೂರು ಸೇರಿದಂತೆ ಹಲವು ಕಡೆ ಮಳೆ

Picture of Savistara

Savistara

Bureau Report

ರಾಜ್ಯದ ಮೇಲೆ ಮುನಿಸಿಕೊಂಡಿದ್ದವರುಣದೇವ ಇತ್ತೀಚೆಗೆ ಸ್ವಲ್ಪ ಕರುಣೆ ತೋರಿದ್ದು, ಮುಂಗಾರು ಚುರುಕಾಗಿ ಇಂದು ಹಾಗೂ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.ಭಾನುವಾರವೂ ರಾಜ್ಯದಲ್ಲಿ ಮಳೆಯಾಗಿದ್ದು, ರಸ್ತೆಗಳೆಲ್ಲ ಹಳ್ಳದಂತಾಗಿವೆ. ಸಣ್ಣಗೆ ಸುರಿದ ಮಳೆಯಿಂದಾಗಿಯೇ ಹತ್ತಾರು ಅವಾಂತರಗಳು, ಟ್ರಾಫಿಕ್ ಜಾಮ್ ಸಂಭವಿಸಿದೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!