ಕೊಡವ ಭಾಷೆಗೂ ರಾಜ್ಯ ಭಾಷೆ ಮಾನ್ಯತೆ ನೀಡಲು ಸಿಎನ್‌ಸಿ ಆಗ್ರಹ

Picture of Savistara

Savistara

Bureau Report

ಮಡಿಕೇರಿ: ತುಳು ಮತ್ತು ಕೊಂಕಣಿ ಭಾಷೆಗಳಂತೆಯೇ ಕೊಡವರ ಮಾತೃಭಾಷೆಯಾದ ಕೊಡವ ಭಾಷೆಗೂ ರಾಜ್ಯ ಭಾಷೆಯ ಮಾನ್ಯತೆ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯಿಸಿದೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್‌.ಯು.ನಾಚಪ್ಪ ತಿಳಿಸಿದ್ದಾರೆ.ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯ ಭಾಷೆಯ ಮಾನ್ಯತೆ ನೀಡಿರುವುದನ್ನು ಸಿಎನ್‌ಸಿ ಸ್ವಾಗತಿಸುತ್ತದೆ. 1956ರ ರಾಜ್ಯ ಪುನರ್‌ ರಚನೆ ಕಾಯ್ದೆಯ 7ನೇ ತಿದ್ದುಪಡಿಯ ಆಶಯ ಹಾಗೂ ಸಂವಿಧಾನದ ವಿಧಿ 345,347 ಮತ್ತು 348ರ ಅಡಿಯಲ್ಲಿ ಕೊಡವ ಭಾಷೆಗೂ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.ಕೊಡವ ಭಾಷೆ ಜೀವಂತ, ಸಮೃದ್ದ ಹಾಗೂ ಪ್ರಾಚೀನ ಭಾಷೆಯಾಗಿದ್ದು, ಭಾಷಾ ತಜ್ಞ ಡಾ.ಪಂಡಿತ್ ಸೀತಾಕಾಂತ್ ಮಹಾಪಾತ್ರ ಅವರು ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸಲು ಶಿಫಾರಸ್ಸು ಮಾಡಿದ್ದರು. ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರ ಕೊಡವ ಭಾಷೆಯನ್ನು ಆಡಳಿತಾಂಗದಲ್ಲಿ ಪರಿಗಣಿಸುವ ಕುರಿತು ಆದೇಶ ಹೊರಡಿಸಿತ್ತು. ಆದರೆ, ನಂತರ ಆ ಆದೇಶವನ್ನು ಹಿಂಪಡೆಯಲಾಗಿದ್ದು, ಅದಕ್ಕೆ ಕಾರಣವೇನು ಎಂಬುವುದು ಇದುವರೆಗೆ ಸ್ಪಷ್ಟವಾಗಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!