ಇಂದು ರಾತ್ರಿಯಿಂದ ಸಾರ್ವಜನಿಕರಿಗೆ ಕಾದಿದೆಯಾ ದೊಡ್ಡ ಆಪತ್ತು?: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸಿಬ್ಬಂದಿ!

Picture of Savistara

Savistara

Bureau Report

​ಬೆಂಗಳೂರು: ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ‘108’ ಆರೋಗ್ಯ ಕವಚ ಆಂಬುಲೆನ್ಸ್ ನೌಕರರು ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡಿದೆ. ಸರ್ಕಾರದ ಕಡೆಯಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ರಾತ್ರಿ 8 ಗಂಟೆಯ ನಂತರ ರಾಜ್ಯಾದ್ಯಂತ 108 ಆಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಿ, ಸಾಮೂಹಿಕ ರಾಜೀನಾಮೆ ನೀಡಲು ನೌಕರರ ಸಂಘ ತೀರ್ಮಾನಿಸಿದೆ.​

ಪ್ರಮುಖ ಬೇಡಿಕೆಗಳು:

ವಾರ್ಷಿಕ ವೇತನ ಹೆಚ್ಚಳ, ಏಕರೂಪ ವೇತನ ಪದ್ಧತಿ ಜಾರಿ, ಕರ್ತವ್ಯದ ವೇಳೆ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಉದ್ಯೋಗ ಭದ್ರತೆ ಒದಗಿಸುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರು ಒತ್ತಾಯಿಸುತ್ತಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ನೀಡಿದ್ದ ಗಡುವು ಅಂತ್ಯಗೊಂಡಿರುವ ಕಾರಣ, ಇಂದು ರಾತ್ರಿಯಿಂದ ಸೇವೆ ಸಂಪೂರ್ಣ ಬಂದ್ ಮಾಡಿ ಹೋರಾಟಕ್ಕೆ ಇಳಿಯಲು ನಿರ್ಧರಿಸಿದ್ದಾರೆ.​

ಆರೋಗ್ಯ ಸೇವೆಯಲ್ಲಿ ತೀವ್ರ ವ್ಯತ್ಯಯದ ಆತಂಕ:

ರಾಜ್ಯಾದ್ಯಂತ ನೌಕರರು ಸಾಮೂಹಿಕವಾಗಿ ಸೇವೆ ಸ್ಥಗಿತಗೊಳಿಸಿ ರಾಜೀನಾಮೆ ನೀಡಲು ಮುಂದಾಗಿರುವುದರಿಂದ ಇಂದಿನಿಂದ ತುರ್ತು ವೈದ್ಯಕೀಯ ಸೇವೆ ಹಾಗೂ ಆಂಬುಲೆನ್ಸ್ ಸಂಚಾರ ಸಂಪೂರ್ಣ ಬಂದ್ ಆಗುವ ಆತಂಕ ಎದುರಾಗಿದೆ. ಇದ್ದಕ್ಕಿದ್ದಂತೆ ತುರ್ತು ಸೇವೆಗಳು ಸ್ಥಗಿತಗೊಂಡರೆ ರೋಗಿಗಳು, ಗರ್ಭಿಣಿಯರು ಹಾಗೂ ಅಪಘಾತಕ್ಕೊಳಗಾದವರು ತೀವ್ರ ಪರದಾಡುವ ಸನ್ನಿವೇಶ ಸೃಷ್ಟಿಯಾಗುವ ಸಾಧ್ಯತೆಯಿದೆ.

[t4b-ticker]
error: Content is protected !!