‘ವಂದೇ ಮಾತರಂ’ ಬಗ್ಗೆ ಸರ್ಕಾರದ ನಿರ್ಧಾರಕ್ಕೆ ರಾಜ್ಯಪಾಲರ ಆಕ್ಷೇಪ

Picture of Savistara

Savistara

Bureau Report

ಬೆಂಗಳೂರು: ‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ರಾಜ್ಯಪಾಲರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ.ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗಾಯನದ ಕುರಿತು ಕೇಂದ್ರ ಸರ್ಕಾರ ನಿರ್ದಿಷ್ಟ ಆದೇಶಗಳನ್ನು ಹೊರಡಿಸಿದೆ. ಎಲ್ಲ ರಾಜ್ಯಗಳೂ ಕೇಂದ್ರದ ಮಾರ್ಗಸೂಚಿಯನ್ನು ಪಾಲಿಸುವಂತೆ ಸೂಚಿಸಲಾಗಿದೆ. ಆದರೆ, ರಾಜ್ಯ ಸರ್ಕಾರದ ನಿರ್ಧಾರವು ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ವಿರುದ್ಧವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಕೇಂದ್ರ ಸರ್ಕಾರದ ಆದೇಶದ ಅನ್ವಯ ವಂದೇ ಮಾತರಂ ಕುರಿತ ರಾಜ್ಯ ಸರ್ಕಾರದ ಆದೇಶವನ್ನು ಮರುಪರಿಶೀಲಿಸಬೇಕು. ಸಾಮೂಹಿಕ ಗಾಯನದ ಸಂದರ್ಭದಲ್ಲೂ ವಂದೇ ಮಾತರಂನ ಅಧಿಕೃತ ಆವೃತ್ತಿಯನ್ನೇ ಹಾಡಬೇಕು ಎಂದು ಕೇಂದ್ರದ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ರಾಜ್ಯ ಸರ್ಕಾರದ ಕಾರ್ಯಕ್ರಮಗಳಿಗೆ ಪ್ರತ್ಯೇಕವಾಗಿ ಸಂಕ್ಷಿಪ್ತ ಅಥವಾ ಬದಲಾದ ಆವೃತ್ತಿಯನ್ನು ನಿಗದಿಪಡಿಸಲು ಅವಕಾಶವಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ.

[t4b-ticker]
error: Content is protected !!