ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 22ರಂದು ನವದೆಹಲಿಯಲ್ಲಿ ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಆಚರಣೆಯ ಲೋಗೋವನ್ನು ಅನಾವರಣಗೊಳಿಸಿದರು.ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಭಕ್ತಿ, ಆಧ್ಯಾತ್ಮಿಕತೆ, ಶಿಕ್ಷಣ ಮತ್ತು ಸಮಾಜಸೇವೆಗೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಜನ್ಮ ಶತಮಾನೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.ಭೇಟಿಯ ಸಂದರ್ಭದಲ್ಲಿ ಸ್ವಾಮೀಜಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಾಂಪ್ರದಾಯಿಕ ಯಕ್ಷಗಾನ ಕಿರೀಟ, ಚಿನ್ನದ ಲೇಪಿತ ಶ್ರೀಕೃಷ್ಣನ ವಿಗ್ರಹ ಹಾಗೂ ಮಂತ್ರಾಕ್ಷತೆಯನ್ನು ನೀಡಿದರು.
ಪ್ರಧಾನಿ ಮೋದಿ–ಉಡುಪಿ ಪೇಜಾವರ ಶ್ರೀಗಳ ಭೇಟಿ
Savistara
Bureau Report
[t4b-ticker]
















































