ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ವಿವಿಧ ರಾಜ್ಯಗಳಲ್ಲಿ ಪಕ್ಷದ ಜಂಟಿ ಪ್ರಧಾನ ಕಾರ್ಯದರ್ಶಿಗಳನ್ನು ಗುರುವಾರ ನೇಮಕ ಮಾಡಿದ್ದಾರೆ.
ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶಿವಪ್ರಕಾಶ್ ಅವರಿಗೆ ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ಗೋವಾದ ಸಂಘಟನಾ ವ್ಯವಹಾರಗಳ ಉಸ್ತುವಾರಿ ವಹಿಸಲಾಗಿದೆ.ಸೌದನ್ ಸಿಂಗ್ ಅವರಿಗೆ ಬಿಹಾರ, ಜಾರ್ಖಂಡ್, ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವರು ವಿ.ಸತೀಶ್ ಅವರು ಸಂಘಟನಾ ವ್ಯವಹಾರಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.
















































