ಪುತ್ತೂರಿನ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ

Picture of Savistara

Savistara

Bureau Report

ಪುತ್ತೂರು: ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ದರ್ಬೆ ನಿವಾಸಿ, ಇಂಜಿನಿಯರ್ ಪ್ರಸನ್ನ ದರ್ಬೆ ಅವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕನ್ನಡಪ್ರಭ ಹಾಗೂ ಏಷಿಯಾನೆಟ್ ಸುವರ್ಣನ್ಯೂಸ್ ವತಿಯಿಂದ ಶನಿವಾರ ಬೆಂಗಳೂರಿನ ತಾಜ್ ಯಶವಂತಪುರದಲ್ಲಿ ನಡೆದ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು.

Advertisement

ಲೋಕಸಭಾ ಸದಸ್ಯ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಚಿತ್ರನಟಿ ಬೃಂದಾ ಆಚಾರ್ಯ, ಪರ್ವ ಗ್ರೂಪ್ ದುಬೈ ಸಂಸ್ಥಾಪಕ ನೀಲೇಶ್ ಎಚ್.ಪಿ. ಹಾಗೂ ಕನ್ನಡಪ್ರಭ–ಏಷಿಯಾನೆಟ್ ಸುವರ್ಣನ್ಯೂಸ್ ಸಮೂಹ ಸಂಪಾದಕೀಯ ನಿರ್ದೇಶಕ ರವಿ ಹೆಗಡೆ ಉಪಸ್ಥಿತರಿದ್ದರು.

Advertisement

ಪ್ರಸನ್ನ ದರ್ಬೆ ಅವರು ಉಪ್ಪಿನಂಗಡಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಶಿಕ್ಷಣ ಪಡೆದ ಬಳಿಕ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

Advertisement

2013ರಿಂದ ಕರ್ನಾಟಕ ಸರ್ಕಾರದ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಲ್ಲಿ ಸೇವೆ ಸಲ್ಲಿಸಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕುಕ್ಕೆ ಸುಬ್ರಹ್ಮಣ್ಯ ಹೊಸಮಠ, ಉದನೆ, ಕಡೇಶ್ವಲ್ಯ–ಅಜಿಲಮೊಗರು, ಪಾಲೋಲಿ, ಕನ್ನಡಕುದ್ರು, ಹೆಜಮಾಡಿ, ಬೆಳ್ವೆ ಸೇರಿದಂತೆ ಹಲವು ಪ್ರಮುಖ ಸೇತುವೆಗಳ ವಿನ್ಯಾಸದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಂಗಳೂರು ವಿಮಾನ ನಿಲ್ದಾಣದ ಎಕ್ಸಿಟ್ ರಸ್ತೆ ವಿನ್ಯಾಸದಲ್ಲಿಯೂ ಕಾರ್ಯನಿರ್ವಹಿಸಿದ್ದರು.

Advertisement

2018ರಲ್ಲಿ ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕದ ತಾತ್ಕಾಲಿಕ ನಗರ ನಿರ್ಮಾಣದ ಮುಖ್ಯ ಇಂಜಿನಿಯರ್ ಆಗಿ ನೇಮಕಗೊಂಡಿದ್ದ ಅವರು, ಸರ್ಕಾರ ಹಾಗೂ ಜೈನ ಮಠದಿಂದ ಸನ್ಮಾನಕ್ಕೆ ಪಾತ್ರರಾಗಿದ್ದರು.2019ರಲ್ಲಿ ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿ ಸ್ವಂತ ಸಂಸ್ಥೆ ಸ್ಥಾಪಿಸಿದ ಅವರು, ಪ್ರಸ್ತುತ ಕರ್ನಾಟಕ ಸರ್ಕಾರದ ಎಂಪನ್ನೆಲ್ಡ್ ಸ್ಟ್ರಕ್ಚರಲ್ ಕನ್ಸಲ್ಟೆಂಟ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹಲವು ಸರ್ಕಾರಿ ಕಟ್ಟಡಗಳು ಮತ್ತು ಸೇತುವೆಗಳ ವಿನ್ಯಾಸಕಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement

ಪುತ್ತೂರಿನ ಮಹಿಳಾ ಕಾಲೇಜು, ಜಿಲ್ಲಾ ಮುಖ್ಯ ನ್ಯಾಯಾಲಯ, ನ್ಯಾಯಾಧೀಶರ ವಸತಿಗೃಹಗಳು ಹಾಗೂ ಸುಳ್ಯ, ಪುತ್ತೂರು, ಮಂಗಳೂರು, ದೇರಳಕಟ್ಟೆ ಸೇರಿದಂತೆ ವಿವಿಧೆಡೆ ನಿರ್ಮಾಣವಾಗಿರುವ ನಿರೀಕ್ಷಣಾ ಭವನಗಳ ವಿನ್ಯಾಸದಲ್ಲಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Advertisement

ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿರುವ ಪ್ರಸನ್ನ ದರ್ಬೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಅವಧಿಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳನ್ನು ರೂಪಿಸಿ ಸರ್ಕಾರಕ್ಕೆ ಸಲ್ಲಿಸಿದ್ದರು. ಪ್ರಸ್ತುತ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕರಾಗಿದ್ದಾರೆ.

Advertisement

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!