ಮೈಸೂರು ದಸರಾ ಗಜಪಡೆಯ ಮಾವುತರು ಮತ್ತು ಕಾವಾಡಿಗರಿಗಾಗಿ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಅಚ್ಚರಿಯ ಘಟನೆ ನಡೆದಿದೆ.ಕಾರ್ಯಕ್ರಮಕ್ಕೆ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಡವಾಗಿ ಆಗಮಿಸಿದ್ದಕ್ಕೆ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗ್ಗೆಯಿಂದಲೂ ಕಾಯುತ್ತಿದ್ದ ಮಾವುತರಿಗೆ ಗೌರವ ನೀಡಬೇಕು, ಸಮಯಕ್ಕೆ ಸರಿಯಾಗಿ ಉಪಹಾರ ನೀಡಬೇಕು, ಅವರನ್ನು ಊಟಕ್ಕಾಗಿ ಕಾಯಿಸುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ ತನ್ವೀರ್ ಸೇಠ್, ಕೂಡಲೇ ಅಧಿಕಾರಿಗಳಿಗೆ ಕಾರ್ಯಕ್ರಮ ಆರಂಭಿಸುವಂತೆ ಸೂಚಿಸಿದರು.
ಆದರೆ ಅಧಿಕಾರಿಗಳು ಕಾರ್ಯಕ್ರಮ ಆರಂಭಿಸಲು ಮತ್ತಷ್ಟು ವಿಳಂಬ ಮಾಡಿದ್ದಕ್ಕೆ ಸಿಡಿಮಿಡಿಗೊಂಡ ಶಾಸಕರು, “ಸಮಯ ಪ್ರಜ್ಞೆ ಇಲ್ವೇನ್ರೀ? ದೇರ್ ಇಸ್ ಎ ಲಿಮಿಟ್ ಫಾರ್ ಎವರಿಥಿಂಗ್ಎಂದು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಸ್ಥಳದಿಂದ ಹೊರನಡೆದರು ಎಂದು ತಿಳಿದುಬಂದಿದೆ.ಈ ಘಟನೆ ಮೈಸೂರಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ
















































