ನ್ಯೂಯಾರ್ಕ್ (ಪಿಟಿಐ): ಮುಂಬರುವ ತಿಂಗಳಲ್ಲಿ ಆಹಾರ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಎಚ್ಚರಿಸಿದ್ದಾರೆ.
ಉಕ್ರೇನ್ ಮತ್ತು ಇರಾನ್ ಸಂಘರ್ಷದಿಂದಾಗಿ ಈಗಾಗಲೇ ರಾಸಾಯನಿಕ ಗೊಬ್ಬರದ ಅಭಾವ ಉಂಟಾಗಿದೆ. ಈ ಯುದ್ಧಗಳು ಜಾಗತಿಕ ದಕ್ಷಿಣ ಆರ್ಥಿಕತೆಯ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತಿವೆ’ ಎಂದು ಅವರು ಸೋಮವಾರ ಹೇಳಿದ್ದಾರೆ.’ಇಂಧನ ಪರಿಸ್ಥಿಯ ಬಗ್ಗೆ ಕಳವಳ ಹೆಚ್ಚಾಗಿದೆ. ಒಂದು ವೇಳೆ ಜನರು ಈ ವಿಚಾರದಲ್ಲಿ ರಾಜಕೀಯ ಮಾಡಿದರೆ, ಮಾರುಕಟ್ಟೆಯಲ್ಲಿ ಪರಿಸ್ಥಿತಿಯು ಇನ್ನಷ್ಟು ಜಟಿಲಗೊಳ್ಳುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
















































