ಮಂಗಳೂರು, ಸೆ.30: ಎಂಆರ್‌ಪಿಎಲ್‌ನಲ್ಲಿ ಸ್ಫೋಟದ ಸುದ್ದಿ ತಿಳಿದ ತಕ್ಷಣ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಬೆಳ್ತಂಗಡಿಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಸ್ಥಳಕ್ಕೆ ಧಾವಿಸಿದ್ದಾರೆ.

ಸಂಸದರ ಹೇಳಿಕೆ:
“ಎಂಆರ್‌ಪಿಎಲ್ ಸ್ಫೋಟದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಎಂಆರ್‌ಪಿಎಲ್ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಬಜ್ಪೆ ಪುರಸಭೆ ಮತ್ತು ಅಗ್ನಿಶಾಮಕ ದಳದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮತ್ತು ಸುರಕ್ಷತಾ ಕಾರ್ಯಾಚರಣೆ ತ್ವರಿತಗೊಳಿಸಲು ಸೂಚನೆ ನೀಡಿದ್ದೇನೆ” ಎಂದು ಸಂಸದರು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸನ್ನದ್ಧರಾಗಿರಲು ಸೂಚನೆ ನೀಡಲಾಗಿದೆ. ಯಾವುದೇ ವದಂತಿಗಳನ್ನು ಹಬ್ಬಿಸಬೇಡಿ, ಆತಂಕಪಡಬೇಡಿ, ಆಡಳಿತದೊಂದಿಗೆ ಸಹಕರಿಸಿ ಎಂದು ಸಂಸದರು ಮನವಿ ಮಾಡಿದ್ದಾರೆ.















































