ಸೌಜನ್ಯ ಪ್ರಕರಣ: ಎಸ್‌ಐಟಿಯಿಂದ ಹೊರಬರಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ನಿರ್ಧಾರ

Picture of Savistara

Savistara

Bureau Report

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಆರಂಭದಲ್ಲೇ ಹಿನ್ನಡೆ ಎದುರಾಗಿರುವ ಬೆಳವಣಿಗೆ ನಡೆದಿದೆ. ಮೃತ ಸೌಜನ್ಯ ಅವರ ತಾಯಿ ಹಾಗೂ ಕೆಲ ಸಾಮಾಜಿಕ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡದಿಂದ ಹೊರಬರಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಡಾ. ವೆಂಕಟೇಶ್ ಪ್ರಸನ್ನ ನಿರ್ಧರಿಸಿದ್ದಾರೆ.

ಈ ಸಂಬಂಧ ವೆಂಕಟೇಶ್ ಪ್ರಸನ್ನ ಅವರು ರಾಜ್ಯ ಸರ್ಕಾರಕ್ಕೆ ಲಿಖಿತ ಮನವಿ ಸಲ್ಲಿಸಿದ್ದು, ತಂಡದಿಂದ ಹೊರಬರಲು ಬಯಸಿರುವುದನ್ನು ಖಚಿತಪಡಿಸಿದ್ದಾರೆ.

ಮೃತ ಸೌಜನ್ಯ ಅವರ ಕುಟುಂಬದವರು ಎಸ್‌ಐಟಿ ತಂಡದ ಕುರಿತು ಅವಿಶ್ವಾಸ ವ್ಯಕ್ತಪಡಿಸಿರುವುದು ಹಾಗೂ ಸಾಮಾಜಿಕ ಹೋರಾಟಗಾರರಿಂದಲೂ ತಂಡದ ರಚನೆ ಬಗ್ಗೆ ಆಕ್ಷೇಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ.

ತನಿಖಾ ತಂಡದಲ್ಲಿ ಮುಂದುವರಿಯುವುದು ನೈತಿಕವಾಗಿ ಸೂಕ್ತವಲ್ಲ ಎಂಬ ಕಾರಣವನ್ನು ಉಲ್ಲೇಖಿಸಿ ವೆಂಕಟೇಶ್ ಪ್ರಸನ್ನ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಸೌಜನ್ಯ ಪ್ರಕರಣದ ಮರುತನಿಖೆ ಆರಂಭವಾಗುವ ಮುನ್ನವೇ ಎಸ್‌ಐಟಿ ತಂಡದ ಸದಸ್ಯರೊಬ್ಬರು ಹೊರಬರಲು ನಿರ್ಧರಿಸಿರುವುದು ಪ್ರಕರಣದ ತನಿಖೆಯ ಮುಂದಿನ ಬೆಳವಣಿಗೆಗಳ ಕುರಿತು ಕುತೂಹಲ ಮೂಡಿಸಿದೆ.

[t4b-ticker]
error: Content is protected !!