ರೈತರ ಗಮನಕ್ಕೆ :ಬೆಳೆ ಸಮೀಕ್ಷೆ ವಿವರ ಪರಿಶೀಲನೆಗೆ ಅ.5 ಕೊನೆಯ ದಿನ: ಆಕ್ಷೇಪಣೆ ಸಲ್ಲಿಸಲು ಅವಕಾಶ

Picture of Savistara

Savistara

Bureau Report

ಬೆಂಗಳೂರು: ಪ್ರಸ್ತಕ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕಾರ್ಯವು ಅಕ್ಟೋಬರ್ 5 ರಂದು ಮುಕ್ತಾಯಗೊಳ್ಳಲಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಪರಿಶೀಲಿಸಿ, ವ್ಯತ್ಯಾಸಗಳಿದ್ದಲ್ಲಿ ತಕ್ಷಣವೇ ಆಕ್ಷೇಪಣೆ ಸಲ್ಲಿಸುವಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 15 ರಿಂದ ಆರಂಭವಾಗಿರುವ ಬೆಳೆ ಸಮೀಕ್ಷೆಯ ವಿವರಗಳು ಸರಿಯಾಗಿ ದಾಖಲಾಗಿವೆಯೇ ಎಂಬುದನ್ನು ರೈತರು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ರೈತರು ತಮ್ಮ ಮೊಬೈಲ್‌ನಲ್ಲಿ ‘ಬೆಳೆ ದರ್ಶಕ’ ಆಪ್‌ ಡೌನ್‌ಲೋಡ್ ಮಾಡಿಕೊಂಡು, ಬೆಳೆ ಸಮೀಕ್ಷೆಯ ವಿವರಗಳನ್ನು ವೀಕ್ಷಿಸಬಹುದಾಗಿದೆ.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಬೆಳೆ, ವಿಸ್ತೀರ್ಣ ಅಥವಾ ಇತರ ಯಾವುದೇ ವಿವರಗಳಲ್ಲಿ ವ್ಯತ್ಯಾಸ ಅಥವಾ ತಪ್ಪುಗಳು ಕಂಡುಬಂದಲ್ಲಿ, ರೈತರು ಇದೇ ‘ಬೆಳೆ ದರ್ಶಕ’ ಆಪ್ ಮೂಲಕವೇ ನೇರವಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಿ ಸೌಲಭ್ಯಗಳಿಗೆ ಬೆಳೆ ಸಮೀಕ್ಷೆ ಆಧಾರ

ಬೆಳೆ ಸಮೀಕ್ಷೆಯಲ್ಲಿ ನಿಖರವಾಗಿ ದಾಖಲಾದ ಬೆಳೆ ವಿವರಗಳೇ ಮುಂದಿನ ದಿನಗಳಲ್ಲಿ ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಹಾಗೂ ಸರ್ಕಾರದ ವಿವಿಧ ಕೃಷಿ/ತೋಟಗಾರಿಕೆ ಯೋಜನೆಗಳ ಸೌಲಭ್ಯ ಪಡೆಯಲು ಪ್ರಮುಖ ಆಧಾರವಾಗಿರುತ್ತವೆ. ಹಾಗಾಗಿ ರೈತರು ಅಕ್ಟೋಬ‌ರ್ 5 ರೊಳಗಾಗಿ ತಮ್ಮ ಬೆಳೆ ವಿವರಗಳನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದು ಸಲ್ಲಿಸುವಂತೆ ಸೂಚಿಸಿದ್ದಾರೆ.

[t4b-ticker]
error: Content is protected !!