ಸುಬ್ರಹ್ಮಣ್ಯ ಆರೋಗ್ಯ ಕೇಂದ್ರ ಪರಿಸರದಲ್ಲಿ ಪ್ರಧಾನಿ ನರೇಂದ್ರ ಮೋದಿಜಿ ಅವರ 25 ವರ್ಷಗಳ ಆಡಳಿತದ ಹೆಜ್ಜೆಗುರುತು ಮತ್ತು 76ನೇ ಜನ್ಮದಿನೋತ್ಸವದ ಪ್ರಯುಕ್ತ ಸೇವಾ ಸಂಕಲ್ಪ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ, ವಿನಯ್ ಕುಮಾರ್ ಕಂದಡ್ಕ, ಕುಸುಮಾಧರ ಕಾರ್ಯತೋಡಿ, ರವಿಪ್ರಸಾದ್ ಶೆಟ್ಟಿ, ಹರ್ಷಿತ್ ಕಾರ್ಜ, ರಾಜೇಶ್, ಇಂದಿರಾ ಬಿ.ಕೆ, ಗುಣವತಿ ಕೊಲ್ಲಂತಡ್ಕ, ಲೋಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.









































