ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

Picture of Savistara

Savistara

Bureau Report

ಶಿವಮೊಗ್ಗ ನಗರದ ವಾಹನ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಗಮನಾರ್ಹ ನೆರವು; ಸಂಸದರ ನಿರಂತರ ಪರಿಶ್ರಮಕ್ಕೆ ಸಂಸದ ದೊರೆತ ಪ್ರತಿಫಲ

ಶಿವಮೊಗ್ಗ, 03 ಅಕ್ಟೋಬರ್ 2026: ಶಿವಮೊಗ್ಗ ನಗರ ಹಾಗೂ ಮಲೆನಾಡಿನ ಸುಗಮ ಸಂಚಾರದ ನಿಟ್ಟಿನಲ್ಲಿ ಮಹತ್ವಪೂರ್ಣ ಉತ್ತೇಜನ ದೊರೆತಿದ್ದು, ಶಿವಮೊಗ್ಗ ನಗರದ ಬಾಕಿ ಉಳಿದಿದ್ದ 4.74 ಕಿ.ಮೀ. ಬೈಪಾಸ್‌ನ ನಾಲ್ಕು ಪಥದ ಕಾಮಗಾರಿ ಹಾಗೂ ನಗರ ವ್ಯಾಪ್ತಿಯಲ್ಲಿನ ಹಾಲಿ ಹೆದ್ದಾರಿಯ ಒಂದು ಬಾರಿ ಸುಧಾರಣಾ ಕಾಮಗಾರಿಗಳಿಗೆ ನೆರವು ನಿಟ್ಟಿನಲ್ಲಿ ಒಟ್ಟು 466.74 ಕೋಟಿ ರೂ. ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಜೂರು ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-206 (ಹೊಸ ರಾ.ಹೆ-69)ರ ಬಾಕಿ ಉಳಿದಿರುವ ಬೈಪಾಸ್ ಕಾಮಗಾರಿ ಪೂರ್ಣಗೊಳ್ಳುವುದರ ಜೊತೆಗೆ, ನಗರ ವ್ಯಾಪ್ತಿಯ ಹಾಲಿ ಹೆದ್ದಾರಿ ಭಾಗದ ಸುಧಾರಣೆಯನ್ನೂ ಈ ಮೂಲಕ ಕೈಗೊಳ್ಳಲಾಗುವುದು. ಶಿವಮೊಗ್ಗ ನಗರದ ಬಹುಕಾಲದ ಸಂಚಾರ ದಟ್ಟಣೆ ಹಾಗೂ ಹೆದ್ದಾರಿ ಮೂಲಸೌಕರ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸಚಿವಾಲಯದೊಂದಿಗೆ ನಿರಂತರವಾಗಿ ವಿಷಯವನ್ನು ಅನುಸರಿಸುತ್ತಾ ಬಂದ ಹಿನ್ನೆಲೆಯಲ್ಲಿ ಈ ಮಹತ್ವದ ಅನುಮೋದನೆ ದೊರೆತಿದೆ. ಈ ಮಹತ್ವದ ಮಂಜೂರಾತಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಜಿ ಅವರಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಬೈಪಾಸ್ ಕಾಮಗಾರಿ ಪೂರ್ಣಗೊಂಡ ಬಳಿಕ ದೂರದ ಹಾಗೂ ಭಾರಿ ವಾಹನಗಳ ಸಂಚಾರವನ್ನು ನಗರದ ಹೊರಭಾಗಕ್ಕೆ ಸಂಪೂರ್ಣವಾಗಿ ತಿರುಗಿಸಲು ಸಾಧ್ಯವಾಗಲಿದ್ದು, ನಗರದಲ್ಲಿನ ಸಂಚಾರ ದಟ್ಟಣೆ ಕಡಿಮೆಯಾಗುವ ಜೊತೆಗೆ ಪ್ರಯಾಣದ ಸಮಯ ಹಾಗೂ ಸಂಚಾರದ ಒತ್ತಡ ಇಳಿದು, ರಸ್ತೆ ಸುರಕ್ಷತೆ ಮತ್ತಷ್ಟು ಸುಧಾರಿಸಲಿದೆ. ನಗರ ವ್ಯಾಪ್ತಿಯ ಹಾಲಿ ಹೆದ್ದಾರಿ ಭಾಗದ ಸುಧಾರಣಾ ಕಾಮಗಾರಿಗಳು ಶಿವಮೊಗ್ಗ ನಗರದ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮವಾಗಿ ಬಲಪಡಿಸಲಿವೆ. _”ಶಿವಮೊಗ್ಗದ ಬಹುಕಾಲದ ಸಂಚಾರ ದಟ್ಟಣೆ ಮತ್ತು ಸಂಪರ್ಕದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

ಈ ಯೋಜನೆಗೆ ಬೆಂಬಲ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಹಾಗೂ ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿ ಜಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಕಾಮಗಾರಿ ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳುವವರೆಗೂ ನಿರಂತರವಾಗಿ ಅನುಸರಿಸಿ, ಶಿವಮೊಗ್ಗ ಹಾಗೂ ಮಲೆನಾಡಿನ ಜನರಿಗೆ ಇದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ನೋಡಿಕೊಳ್ಳುತ್ತೇನೆ”_ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!