ಕೋಲಾರ: ಎನ್‌ಡಿಎ ಸಮನ್ವಯ ಸಭೆಯಲ್ಲಿ ‘ಮಿತ್ರರ’ ಕಿತ್ತಾಟ

Picture of Savistara

Savistara

Bureau Report

ಕೋಲಾರ: ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ನಗರ ಹೊರವಲಯದ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಹೊಡೆದಾಟಕ್ಕೆ ಮುಂದಾದರು.

ಮಾಲೂರು ವಿಧಾನಸಭಾ ಕ್ಷೇತ್ರದ ವಿಚಾರವಾಗಿ ಬಿಜೆಪಿ ಮುಖಂಡರು ಸಂಸದ ಜೆಡಿಎಸ್‌ನ ಎಂ.ಮಲ್ಲೇಶ್ ಬಾಬು ಕಾರ್ಯವೈಖರಿ ವಿರುದ್ಧ ತಿರುಗಿಬಿದ್ದರು. ಮೈತ್ರಿ ಧರ್ಮ ಪಾಲನೆ ಮಾಡದೆ ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ಬಿಜೆಪಿಯ ಕೆ.ಎಸ್.ಮಂಜುನಾಥಗೌಡ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಸಿಡಿದೆದ್ದ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಕೈ ಮಾಡಲು ಮುನ್ನುಗ್ಗಿದರು.ಆಗ ಸಭೆಯಲ್ಲಿ ಪರಸ್ಪರ ಕಿತ್ತಾಟ, ಮಾತಿನ ಚಕಮಕಿ, ಕೂಗಾಟ, ನೂಕಾಟ, ಗದ್ದಲ ಜೋರಾಯಿತು. ಜಗಳ ಬಿಡಿಸಲು ಪಕ್ಷದ ಮುಖಂಡರು ಪ್ರಯತ್ನಿಸಿದರು. ಕೊನೆಗೆ ಪೊಲೀಸರು ಮಧ್ಯ ಪ್ರವೇಶಿಸಿದರು. ನಂತರ ಮಾಲೂರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಬಹಿಷ್ಕರಿಸಿ ಘೋಷಣೆ ಕೂಗುತ್ತಾ ಹೊರನಡೆದರು.’2024ರ ಲೋಕಸಭೆ ಚುನಾವಣೆಯಲ್ಲಿ ಮಲ್ಲೇಶ್ ಬಾಬು ಅವರನ್ನು ಗೆಲ್ಲಿಸಲು ಮಾಲೂರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸಾಕಷ್ಟು ಬೆವರು ಹರಿಸಿದ್ದಾರೆ. ಕೇಸುಗಳನ್ನು ಹಾಕಿಸಿಕೊಂಡಿದ್ದಾರೆ.

ಆದರೆ ಈಗ ಅವರು ನಮ್ಮನ್ನು ಮರೆತು ಹೊಂದಾಣಿಕೆ ರಾಜಕಾರಣದಲ್ಲಿ ತೊಡಗಿದ್ದಾರೆ. ಕಾರ್ಯಕರ್ತರ ಕಷ್ಟ, ಸುಖ ವಿಚಾರಿಸಿಲ್ಲ. ನಮ್ಮ ನಾಯಕ ಮಂಜುನಾಥಗೌಡ ಅವರನ್ನು ನಿರ್ಲಕ್ಷಿಸುತ್ತಿದ್ದಾರೆ. ಯಾವುದೇ ರೀತಿ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ತಾಲ್ಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ. ಈ ಸಂಬಂಧ ಸಂಸದರು ಸ್ಪಂದಿಸುತ್ತಿಲ್ಲ. ಸಮನ್ವಯ ಸಮಿತಿ ಸಭೆಯಿಂದ ಯಾವುದೇ ಪ್ರಯೋಜನವೂ ಇಲ್ಲ’ ಎಂದು ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದರು.

ಈ ಮಧ್ಯೆ, ಪತ್ರಿಕಾಗೋಷ್ಠಿಯಲ್ಲೂ ಮಾತಿನ ಚಕಮಕಿ ನಡೆಯಿತು. ಸಮನ್ವಯ ಸಮಿತಿ ಸಭೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ತೂಪಲ್ಲಿ ಚೌಡರೆಡ್ಡಿ ಅವರನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ ಎಂದು ಜೆಡಿಎಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!