ಹಿಂದೂಗಳ ಮತಕ್ಕೆ ಕೊಕ್ಕೆ: ಸಿ.ಟಿ.ರವಿ ಆರೋಪ

Picture of Savistara

Savistara

Bureau Report

ಚಿತ್ರದುರ್ಗ: ‘ಮತದಾರರ ಪಟ್ಟಿಯಿಂದ ಮುಸ್ಲಿಂ ಮತಗಳನ್ನುತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ಬೊಬ್ಬೆ ಹಾಕುತ್ತಿದೆ. ಆದರೆ, ವಾಸ್ತವವಾಗಿ ಹಿಂದೂ ಮತಗಳನ್ನು ತೆಗೆದು ಹಾಕಲಾಗಿದೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ 37,000 ಮತದಾರರ ಹೆಸರು ತೆಗೆಯಲಾಗಿದ್ದು, ಅದರಲ್ಲಿ 32,000 ಹಿಂದೂಗಳಿದ್ದಾರೆ. ಇದೊಂದು ದೇಶದ್ರೋಹದ ಕ್ರಮವಾಗಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆರೋಪಿಸಿದರು.

ಶನಿವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಿಂದೂ ಮತದಾರರ ಹೆಸರು ತೆಗೆದುಹಾಕಿರುವ ವಿಷಯ ಬೆಳಕಿಗೆ ಬರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಮುಖಂಡರು ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದರು.“ಫಾರಂ-7ರ ಅಡಿಯಲ್ಲಿ ಆಕ್ಷೇಪಣೆ ಸಲ್ಲಿಸುವುದು ಅಪರಾಧವಲ್ಲ. ಅಧಿಕಾರಿಗಳು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!