ಮುಕ್ತಾಯಗೊಂಡ ಐಚಿ-ನಗೋಯಾ ಏಷ್ಯನ್ ಗೇಮ್ಸ್; ಪದಕ ಪಟ್ಟಿಯಲ್ಲಿ ಭಾರತಕ್ಕೆ 4ನೇ ಸ್ಥಾನ

Picture of Savistara

Savistara

Bureau Report

ನಗೋಯಾ: ಜಪಾನ್‌ ‘ಐಚಿ-ನಗೋಯಾ’ದಲ್ಲಿ ನಡೆದ 20ನೇ ಏಷ್ಯನ್ ಗೇಮ್ಸ್ ಪಂದ್ಯಾವಳಿಯು ಮುಕ್ತಾಯಗೊಂಡಿದೆ.

ಸೆ.19ರಂದು ಏಷ್ಯನ್ ಗೇಮ್ಸ್ ಪಂದ್ಯಾವಳಿಯು ಆರಂಭವಾಗಿತ್ತು.ಏಷ್ಯನ್ ಗೇಮ್ಸ್‌ನ ಸಮಾರೋಪ ಸಮಾರಂಭದಲ್ಲಿ ಏಷ್ಯಾದ ಒಲಿಂಪಿಕ್‌ ಕೌನ್ಸಿಲ್ಸ್‌ ಅಧ್ಯಕ್ಷ ಶೇಖ್ ಜೋವಾನ್ ಬಿನ್ ಹಮದ್ ಅಲ್ ಥಾನಿ ಅವರು ಕತಾರ್‌ನ ಪ್ರತಿನಿಧಿಗಳಿಗೆ ಜ್ಯೋತಿಯನ್ನು ಹಸ್ತಾಂತರಿಸಿದರು. ಈ ವೇಳೆ 17 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು, ಅಧಿಕಾರಿಗಳು ಮತ್ತು ವೀಕ್ಷಕರು ಹಾಜರಿದ್ದರು.20ನೇ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕವನ್ನು ಗೆದ್ದ ಟ್ರ್ಯಾಪ್ ಶೂಟ‌ರ್ ನೀರೂ ಧಂಡಾ ಅವರು ಭಾರತದ ಧ್ವಜಧಾರಿಯಾಗಿದ್ದಾರೆ.

ಈ ಪಂದ್ಯಾವಳಿಯಲ್ಲಿ ಭಾರತವು 21 ಚಿನ್ನ, 27 ಬೆಳ್ಳಿ, 37 ಕಂಚು ಸೇರಿದಂತೆ ಒಟ್ಟು 85 ಪದಕಗಳನ್ನು ಗೆದ್ದಿದೆ. ಈ ಮೂಲಕ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಚೀನಾ, ಜಪಾನ್ ಮತ್ತು ಕೊರಿಯಾ ದೇಶಗಳು ಭಾರತಕ್ಕಿಂತ ಹೆಚ್ಚಿನ ಪದಕ ಗೆದ್ದಿವೆ.ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಫೈನಲ್ ಪಂದ್ಯ ಮತ್ತು ಹಾಕಿ ಸೆಮಿಫೈನಲ್ ಪಂದ್ಯಗಳು, ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದ ಪಂದ್ಯಗಳಾಗಿವೆ.2030ರಲ್ಲಿ ಕತಾರ್‌ನ ದೋಹಾದಲ್ಲಿ ಏಷ್ಯನ್ ಗೇಮ್ಸ್‌ನ 21ನೇ ಆವೃತ್ತಿ ನಡೆಯಲಿದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!