ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಘಟ್ಟ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ವಾತಾವರಣದ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಲಕ್ಷಣಗಳಿರುವುದರಿಂದ ಜಾಗರೂಕರಾಗಿರಲು ತಿಳಿಸಲಾಗಿದೆ. ಮಳೆಯ ತೀವ್ರತೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ತುಮಕೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಕೂಡ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ಇರಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯಿದ್ದರೆ; ಚಾಮರಾಜನಗರ, ರಾಮನಗರ, ತುಮಕೂರು, ಕೊಡಗು, ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.











































