ಸುಳ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ಒಂದು ತಿಂಗಳ “ಸೇವಾ ಸಂಕಲ್ಪ ಅಭಿಯಾನ”ದ ಭಾಗವಾಗಿ ಸುಳ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಸೇವಾ ಜ್ಯೋತಿ ಸ್ವೀಕಾರ ಹಾಗೂ ಭವ್ಯ ವಾಹನ ಜಾಥಾ: ಸೆ.7ರಂದು ಬೆಳಿಗ್ಗೆ 7 ಗಂಟೆಗೆ ಅಲಂಕಾರಿನ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಜಿಲ್ಲೆಯಿಂದ ಆಗಮಿಸುವ “ಸೇವಾ ಜ್ಯೋತಿ”ಯನ್ನು ಹಿರಿಯ ಕಾರ್ಯಕರ್ತರ ಸಮ್ಮುಖದಲ್ಲಿ ಗೌರವಪೂರ್ವಕವಾಗಿ ಸ್ವೀಕರಿಸಲಾಗುವುದು. ತದನಂತರ ಬಿಜೆಪಿ ಧ್ವಜಗಳನ್ನು ಅಳವಡಿಸಿದ ವಾಹನಗಳ ಭವ್ಯ ರ‍್ಯಾಲಿ/ಜಾಥಾದ ಮೂಲಕ ಜ್ಯೋತಿಯನ್ನು ಬಿಸಿ ರೋಡಿನ ಬಂಟರ ಭವನಕ್ಕೆ ಕರೆತರಲಾಗುವುದು.
ಪ್ರಧಾನಿ ಭಾಷಣದ ನೇರಪ್ರಸಾರ ವೀಕ್ಷಣೆ:ಬಳಿಕ ಬೆಳಿಗ್ಗೆ 9 ಗಂಟೆಗೆ ಬಿಸಿ ರೋಡಿನ ಬಂಟರ ಭವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇರಪ್ರಸಾರ ಭಾಷಣದ ಸಾಮೂಹಿಕ ವೀಕ್ಷಣೆ ಕಾರ್ಯಕ್ರಮ ನಡೆಯಲಿದೆ. ಈ ಮೂಲಕ ಪಕ್ಷದ ಸಂಘಟನಾ ಬಲವರ್ಧನೆ ಹಾಗೂ ‘2027ರ ವಿಕಸಿತ ಭಾರತ’ ಸಂಕಲ್ಪಕ್ಕೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ಮಾಡಲಾಗುವುದು.
ಬಿಜೆಪಿ ಮಂಡಲ ಅಧ್ಯಕ್ಷರ ಮನವಿ:ಈ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಹಿರಿಯ-ಕಿರಿಯ ಕಾರ್ಯಕರ್ತರು, ಪಕ್ಷದ ಪ್ರಮುಖರು, ವಿವಿಧ ಸಹಕಾರಿ ಸಂಘಗಳ ಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು ಹಾಗೂ ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.












































