ನಗರದಲ್ಲಿ ರೌಡಿ ಚಟುವಟಿಕೆಗಳ ಮೇಲಿನ ನಿಯಂತ್ರಣ ಕ್ರಮಗಳನ್ನು ಮುಂದುವರಿಸಿರುವ ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿಗಳು, ಕೊಲೆ ಪ್ರಕರಣದಲ್ಲಿ ಕಳೆದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ರೌಡಿಶೀಟರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರೌಡಿಗಳ ವಿರುದ್ಧ ನಿರಂತರ ನಿಗಾ ವಹಿಸಿರುವ ಸಿಸಿಬಿ, ಡಿಸಿಪಿ ಶ್ರೀನಿವಾಸ್ ಗೌಡ ಅವರ ಮಾರ್ಗದರ್ಶನದಲ್ಲಿ ನಿತ್ಯ ಕಾರ್ಯಾಚರಣೆ ಪ್ರಾರಂಭಿಸಿದೆ. ಶ್ರೀನಿವಾಸ್ ಗೌಡ ಈ ನಡೆಗೆ ಸದ್ಯ ರೌಡಿ ಪಡೆ ಬೆಚ್ಚಿಬಿದ್ದಿದೆ.
ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯ ಕೊಲೆ ಪ್ರಕರಣ ಒಂದರಲ್ಲಿ (.. 149/2020, 32 0 302, 143, 147, 148 ಸಹಿತ 49) ಭಾಗಿಯಾಗಿ ಕಳೆದ 5 ವರ್ಷಗಳಿಂದ ಪೊಲೀಸರಿಗೆ ಸಿಗದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸೈಯ್ಯದ್ ಶೋಬೇನ್ ಬಿನ್ ಸೈಯ್ಯದ್ ಅಪ್ಪರ್ ಎಂಬುವವನನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಈತನ ಪತ್ತೆಗೆ ಸ್ಥಳೀಯ ಪೊಲೀಸರು ಸಾಕಷ್ಟು ಯತ್ನ ನಡೆಸಿದ್ದರೂ ಆತ ಕೈಗೆ ಸಿಗದಂತೆ ಓಡಾಡಿಕೊಂಡಿದ್ದನು. ಸಿಸಿಬಿ ಅಧಿಕಾರಿಗಳು ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.ಮತ್ತೊಂದು ಪ್ರಕರಣದಲ್ಲಿ, ಕೊಲೆಯತ್ನ, ದರೋಡೆಯತ್ನ ಹಾಗೂ ಡ್ರಗ್ ಪ್ರಕರಣ ಸೇರಿದಂತೆ ಸುಮಾರು 8ಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಇಮ್ರಾನ್ ಅಲಿಯಾಸ್ ಕಬೂತರ್ ಇಮ್ರಾನ್ ಬಿನ್ ಸೈಯ್ಯದ್ ಸಮಿ (38) ಎಂಬುವವನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈತ ಕಳೆದ 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಮೀನು ರಹಿತ ವಾರಂಟ್ (NBW) ಜಾರಿಗೊಳಿಸಿತ್ತು. ಪತ್ತೆಯಾದ ರೌಡಿಶೀಟರ್‌ನನ್ನು ಸಿಸಿಬಿ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳ ಮುಂದೆ ಹಾಜರುಪಡಿಸಿದಾರೆ.
ಡಿಸಿಪಿ ಶ್ರೀನಿವಾಸ್ ಗೌಡ ಅವರ ಮಾರ್ಗದರ್ಶನದಲ್ಲಿ ಸಿಸಿಬಿಯ ವಿಶೇಷ ತಂಡವು ಈ ಕಾರ್ಯಾಚರಣೆ ನಡೆಸುತ್ತಿದ್ದು, ತಲೆಮರೆಸಿಕೊಂಡಿರುವ ಅಪರಾಧಿಗಳು ಹಾಗೂ ರೌಡಿಶೀಟರ್‌ಗಳ ಹೆಡೆಮುರಿ ಕಟ್ಟುವಲ್ಲಿ ಸಫಲವಾಗಿದೆ.












































