2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!

Picture of Savistara

Savistara

Bureau Report

ಬೆಂಗಳೂರು : 2027 ಹೊಸ ವರ್ಷ ಆರಂಭದಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗಿದೆ.

ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆ ನಡೆಸಲಾಗಿದ್ದು, ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದರೆ ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ಸರಕಾರ ಮುಂದಾಗಿದೆ.

ಎರಡು ದಿನಗಳ ಹಿಂದೆ ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ವಾರ್ಡುವಾರು ಮೀಸಲಾತಿ ಪಟ್ಟಿಗೆ ಒಪ್ಪಿಗೆ ಕೋರಿ ರಾಜ್ಯ ಸರಕಾರ ಮನವಿ ಸಲ್ಲಿಸಿತ್ತು. ರಾಜ್ಯದಲ್ಲಿ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿದೆ. ಚುನಾವಣಾ ಆಯೋಗ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದ ಬಳಿಕ ಆ ಸಂಬಂಧ ಕರಡು ಅಧಿಸೂಚನೆ ಹೊರಬೀಳಲಿದೆ..

ಸಾರ್ವಜನಿಕ ಆಕ್ಷೇಪ ಪರಿಗಣಿಸಿದ ಬಳಿಕ ಡಿಸೆಂಬರ್ ಮಧ್ಯದಲ್ಲಿ ವಾರ್ಡುವಾರು ಮೀಸಲಾತಿ ಪಟ್ಟಿಯ ಅಂತಿಮ ಅಧಿಸೂಚನೆ ಪ್ರಕಟವಾಗಲಿದ್ದು. ಜನವರಿ ಮೊದಲ ವಾರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ ನಡೆಸಲು ರಾಜ್ಯ ಮುಂದಾಗಿದ್ದೇವೆ. ಈ ಚುನಾವಣೆಯ 15 ದಿನಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವ‌ರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!