ಕರ್ನಾಟಕದಲ್ಲಿ ಮತ್ತೆ ಮಳೆಯ ಆರ್ಭಟ: 6 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಬೆಂಗಳೂರಿಗೂ ಎಚ್ಚರಿಕೆ!

Picture of Savistara

Savistara

Bureau Report

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೋಡಿದೆ. ಅಕ್ಟೋಬರ್ 9ರಂದು ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದ್ದು, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಭಾರೀ ಮಳೆಯಾಗಲಿದೆ

ಇಲಾಖೆಯ ಪ್ರಕಾರ ಅಕ್ಟೋಬರ್ 9ರಂದು ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರೀ ಮಳೆಯಾಗಬಹುದು. ಮಳೆಯೊಂದಿಗೆ ಗುಡುಗು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇದರ ಜತೆಗೆ ತುಮಕೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬ‌ರ್ 9ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವಾತಾವರಣದಲ್ಲಿ ಬದಲಾವಣೆ ಕಂಡುಬಂದರೂ, ಬಳ್ಳಾರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ

ಕರಾವಳಿಗೂ ಮಳೆಯ ಸ್ಪರ್ಶ

ಕರಾವಳಿ ಭಾಗದಲ್ಲಿಯೂ ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದ್ದು, ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗಬಹುದು. ಆದರೆ ಉತ್ತರ ಕನ್ನಡದಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಒಣಹವೆಯೇ ಮುಂದುವರಿಯುವ ಮುನ್ಸೂಚನೆ ಇದೆ.

ಇಂದು ಅಂದರೆ ಅಕ್ಟೋಬ‌ರ್ 8ರಂದು ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇಲ್ಲ.ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!