ಕಡಬ ಪಟ್ಟಣ ಪಂಚಾಯತಿಗೆ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Picture of Savistara

Savistara

Bureau Report

ಕಡಬ, ಅ. 8: ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಕಡಬ ಪಟ್ಟಣ ಪಂಚಾಯತಿಗೆ ಭೇಟಿ ನೀಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯಾಧಿಕಾರಿ, ಇಂಜಿನಿಯರ್ ಹಾಗೂ ಇತರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ 15ನೇ ಹಣಕಾಸು ಆಯೋಗದ ಅನುದಾನ, ರಾಜ್ಯ ಹಣಕಾಸು ಆಯೋಗದ ಅನುದಾನ, ಅಮೃತ ನಗರೋತ್ಥಾನ ಯೋಜನೆಯಡಿ ಸಾರ್ವಜನಿಕ ಹಾಗೂ ವೈಯಕ್ತಿಕ ಕಾಮಗಾರಿಗಳು, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ ಸೇರಿದಂತೆ ವಿವಿಧ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಸತಿ ಹಾಗೂ ವಾಣಿಜ್ಯ ಕಟ್ಟಡಗಳಿಂದ ಹಸಿ ಮತ್ತು ಒಣ ಕಸವನ್ನು ಸಮರ್ಪಕವಾಗಿ ಸಂಗ್ರಹಿಸುವುದು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು, ಘನತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಹಾಗೂ ಕಟ್ಟಡ ತೆರಿಗೆ ಸೇರಿದಂತೆ ವಿವಿಧ ತೆರಿಗೆಗಳ ಸಮರ್ಪಕ ಸಂಗ್ರಹಣೆ ಕುರಿತು ಸಭೆಯಲ್ಲಿ ವಿಶೇಷವಾಗಿ ಚರ್ಚಿಸಲಾಯಿತು.ಸರ್ಕಾರದಿಂದ ಲಭ್ಯವಾಗುವ ಅನುದಾನವನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ಗರಿಷ್ಠ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು.

ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡುವುದರ ಜೊತೆಗೆ, ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಕಿಶೋರ್ ಕುಮಾರ್ ಪುತ್ತೂರು ಅವರು ಅಧಿಕಾರಿಗಳಿಗೆ ಸೂಚಿಸಿದರು. ಕಡಬ ಪಟ್ಟಣ ಪಂಚಾಯಿತಿಗೆ ಸಮಗ್ರ ಕುಡಿಯುವ ನೀರಿನ ಯೋಜನೆ, ನಿವೇಶನ ವಿತರಿಸಲು ಜಮೀನು ಮಂಜೂರಾತಿ, ಖಾಲಿ ಹುದ್ದೆಗಳ ಭರ್ತಿ,ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಡಳಿತ ಮಂಡಳಿಯವರು ಶಾಸಕರಿಗೆ ಮನವಿ ಸಲ್ಲಿಸಿದರು ಸಭೆಯ ಬಳಿಕ ಶಾಸಕರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಘಟಕದ ಕಾರ್ಯನಿರ್ವಹಣೆ, ಕಸ ವಿಂಗಡಣೆ, ಸಂಗ್ರಹಣೆ ಹಾಗೂ ವಿಲೇವಾರಿ ವ್ಯವಸ್ಥೆಯನ್ನು ಪರಿಶೀಲಿಸಿ, ಘಟಕವನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.“ಸ್ವಚ್ಛತೆ ಮತ್ತು ಮೂಲಭೂತ ಸೌಲಭ್ಯಗಳು ಪ್ರತಿಯೊಬ್ಬ ನಾಗರಿಕನ ಹಕ್ಕು. ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛ, ಸುಂದರ ಹಾಗೂ ಸುಸಜ್ಜಿತ ವಾತಾವರಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು” ಎಂದು ಕಿಶೋರ್ ಕುಮಾರ್ ಪುತ್ತೂರು ಅವರು ಹೇಳಿದರು.ಸಭೆಯಲ್ಲಿ ಪಟ್ಟಣ ಪಂಚಾಯತಿಯ ಅಧ್ಯಕ್ಷರು ಉಪಾಧ್ಯಕ್ಷರು ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯ ಅಧಿಕಾರಿ,ಇಂಜಿನಿಯರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!