ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್-2026’ ಉದ್ಘಾಟನೆ

Picture of Savistara

Savistara

Bureau Report

ಪುತ್ತೂರು, ಅ.9 (ಕರ್ನಾಟಕ ವೇವ್ಸ್): ನೆಹರುನಗರದ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, IEEE ಬೆಂಗಳೂರು ವಿಭಾಗ ಹಾಗೂ IEEE ಮಂಗಳೂರು ಉಪವಿಭಾಗದ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್-2026’ ಇಂದು ಅದ್ಧೂರಿಯಾಗಿ ಉದ್ಘಾಟನೆಗೊಂಡಿತು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಐಐಎಸ್‌ಸಿ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್‌ನ ಪ್ರೊ. ಡಾ. ನವಕಾಂತ ಭಟ್, ಗೌರವ ಅತಿಥಿಗಳಾಗಿ ಟಿಸಿಎಸ್ ಹಿರಿಯ ವಿಜ್ಞಾನಿ ಹಾಗೂ IEEE ಬೆಂಗಳೂರು ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಮಿಶ್ರ ಭಾಗವಹಿಸಿದ್ದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರವಿಕೃಷ್ಣ ಡಿ. ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು.

ಸಮ್ಮೇಳನದ ಉದ್ದೇಶ:ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ಕಮ್ಯುನಿಕೇಶನ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್, ರೊಬೋಟಿಕ್ಸ್ ಹಾಗೂ ಹೆಲ್ತ್‌ಕೇರ್ ಕ್ಷೇತ್ರಗಳಲ್ಲಿ ನಡೆಯುತ್ತಿರುವ ನೂತನ ಸಂಶೋಧನೆ, ತಂತ್ರಜ್ಞಾನ ಮತ್ತು ನಾವೀನ್ಯತೆಗೆ ವೇದಿಕೆ ಕಲ್ಪಿಸಳಾಗಿದೆ

ಪ್ರಬಂಧ ಮಂಡನೆ:ಈ ಬಾರಿ ದೇಶ-ವಿದೇಶಗಳಿಂದ ಒಟ್ಟು 1,071 ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿದ್ದವು. ತಜ್ಞರ ಸಮಿತಿಯಿಂದ ಗುಣಮಟ್ಟದ ಪರಿಶೀಲನೆ ನಡೆಸಿ 94 ಪ್ರಬಂಧಗಳನ್ನು ಮಂಡನೆಗೆ ಆಯ್ಕೆ ಮಾಡಲಾಗಿದೆ.

ಸಂಪನ್ಮೂಲ ವ್ಯಕ್ತಿಗಳು:ಸೆಮಿಕಂಡಕ್ಟರ್ ವಿಎಲ್‌ಎಸ್‌ಐ ತಂತ್ರಜ್ಞಾನ, 6G ಸಂಪರ್ಕ ವ್ಯವಸ್ಥೆ ಹಾಗೂ AI ಆಧಾರಿತ ವಿಕೇಂದ್ರೀಕೃತ ಬುದ್ಧಿಮತ್ತೆ ಕುರಿತು ತಜ್ಞರಿಂದ ವಿಶೇಷ ಉಪನ್ಯಾಸಗಳು ನಡೆಯಲಿವೆ. ಸ್ಮಾರ್ಟ್‌ಬೀಮ್ ರೆಸೊನೆಟಿಕ್ಸ್‌ನ ಸಂಸ್ಥಾಪಕಿ ಡಾ. ಶ್ವೇತಾ ಅಮಿತ್ ಹಾಗೂ ಬ್ಲೂಟ್ ಟೆಕ್ನಾಲಜೀಸ್‌ನ ಸಂಸ್ಥಾಪಕ-ಸಿಟಿಒ ಸುದರ್ಶನ್ ಶೆನ್ವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದಾರೆ. ವಿವೇಕಾನಂದ ಎಂಜಿನಿಯರ್ ಕಾಲೇಜ್ ಸಂಚಾಲಕ ಪ್ರಸನ್ನ ದರ್ಬೆ ಉಪಸ್ಥಿತರಿದ್ದರು ಸಮ್ಮೇಳನದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಸಂಶೋಧಕರು, ಪ್ರಾಧ್ಯಾಪಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!