ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ

Picture of Savistara

Savistara

Bureau Report

ಹೊಸದಿಲ್ಲಿ: ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿ ಗಮನ ಸೆಳೆದಿದೆ. ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದೆ.

ಪಶ್ಚಿಮ ಬಂಗಾಳದ ರೇಜಿನಗರ ಮತ್ತು ನಂದಿಗ್ರಾಮ, ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ಹಾಗೂ ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇದರ ಜತೆಗೆ ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರಕ್ಕೂ ಚುನಾವಣೆ ನಡೆದಿತ್ತು. ಲಭ್ಯವಿರುವ ಮಾಹಿತಿಯ ಪ್ರಕಾರ, ಕೆಲವು ಕ್ಷೇತ್ರಗಳಲ್ಲಿ ಫಲಿತಾಂಶದ ಚಿತ್ರಣ ಸ್ಪಷ್ಟವಾಗಿದ್ದರೂ ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ಬಾಕಿಯಿದೆ.

ನಾಗೌನ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರವು ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರದ್ಯುತ್‌ ಬೊರ್ದೊಲೊಯಿ ಅವರು ಬಿಜೆಪಿ ಅಭ್ಯರ್ಥಿ ಸುರೇಶ್‌ ಬೋರಾ ವಿರುದ್ಧ 2,12,231 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಬಳಿಕ ಪ್ರದ್ಯುತ್ ಬೊರ್ದೊಲೊಯಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ದಿಸ್ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹೀಗಾಗಿ ನಾಗೌನ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಿತು.

ಸದ್ಯದ ಮಾಹಿತಿಯ ಪ್ರಕಾರ, ಬಿಜೆಪಿ ಅಭ್ಯರ್ಥಿ ದೇವಶಿಸ್ ಶರ್ಮಾ ಅವರು ಎಐಯುಡಿಎಫ್ ಅಭ್ಯರ್ಥಿ ಬದ್ರುದ್ದೀನ್ ಅಜ್ಜಲ್ ವಿರುದ್ಧ ಸುಮಾರು 1.2 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಬಾಮಣಿ ಬೋರಾ ಮೂರನೇ ಸ್ಥಾನದಲ್ಲಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿ ಪೈಪೋಟಿಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಸಿರಾಣಿ ರಥ್ ಅವರು ಕಾಂಗ್ರೆಸ್‌ ಅಭ್ಯರ್ಥಿ ಮಿಲನ್ ಪ್ರಧಾನ್ ವಿರುದ್ಧ ಸುಮಾರು 1.05 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಂದಿಗ್ರಾಮ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.ಇನ್ನು ರೇಜಿನಗರ ಕ್ಷೇತ್ರದಲ್ಲಿ ಸಖಾರವ್ ಸರ್ಕಾ‌ರ್ ಅವರು ಎಜೆಯುಪಿ ಅಭ್ಯರ್ಥಿ ಗೋಲಂ ನಬಿ ಆಜಾದ್‌ ವಿರುದ್ಧ ಸುಮಾರು 38 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕ್ಷೇತ್ರದಲ್ಲಿಯೂ ಮತ ಎಣಿಕೆಯ ಬೆಳವಣಿಗೆಗಳ ಮೇಲೆ ರಾಜಕೀಯ ವಲಯದ ಗಮನ ನೆಟ್ಟಿದೆ.

ತಮಿಳುನಾಡಿನಲ್ಲಿ ಟಿವಿಕೆ ಅಭ್ಯರ್ಥಿಗಳಿಗೆ ಮುನ್ನಡೆತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.ಮಧುರಂಟಕಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಮರಗತಂ ಕುಮಾರವೇಲು ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಮಾರು 6 ಸಾವಿರ ಮತಗಳ ಮುನ್ನಡೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಎಐಎಡಿಎಂಕೆ ಅಭ್ಯರ್ಥಿಯಾಗಿದ್ದ ಅವರು, ನಂತರ ಟಿವಿಕೆ ಸೇರಿ ಸ್ಪರ್ಧಿಸಿದ್ದರು ಎನ್ನಲಾಗಿದೆ.

ಧಾರಾಪುರಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಪಿ. ಸತ್ಯಭಾಮಾ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ ಸುಮಾರು 9,600 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತ್ಯಭಾಮಾ, ಡಿಎಂಕೆ ಅಭ್ಯರ್ಥಿ ಟಿ. ಇಂದಿರಾಣಿ ವಿರುದ್ಧ 16,727 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.

ಪುದುಚೇರಿಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಗೆಲುವುಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಆಲ್ ಇಂಡಿಯಾ ಎನ್.ಆ‌ರ್. ಕಾಂಗ್ರೆಸ್ ಅಭ್ಯರ್ಥಿ ಅಶೋಕ್‌ ಆನಂದ್‌ ಅವರು ಕಾಂಗ್ರೆಸ್ ಅಭ್ಯರ್ಥಿ ಇ. ವಿನಾಯಗಂ ವಿರುದ್ಧ 8,482 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ತಟ್ಟನಚಾವಡಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.

ಉಪಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ರಾಜ್ಯಗಳ ರಾಜಕೀಯ ಲೆಕ್ಕಾಚಾರಗಳ ಮೇಲೆ ಇದರ ಪರಿಣಾಮದ ಚಿತ್ರಣ ಮತ್ತಷ್ಟು ಸ್ಪಷ್ಟವಾಗಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!