ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಅಭಿಜೀತ್ ದೀಪೆ, ಆಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ದೆಹಲಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಅವರನ್ನು ಹಾಜರುಪಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.ಶನಿವಾರ ಜಂತರ್ ಮಂತರ್‌ನಲ್ಲಿ ನಡೆಯಲಿದ್ದ ಪ್ರತಿಭಟನೆಗೂ ಮುನ್ನ, ವಿಮಾನದಲ್ಲೇ ಈ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶನಿವಾರ ಪ್ರತಿಭಟನಾಕಾರರು ಜಂತರ್ ಮಂತರ್ ತಲುಪದಂತೆ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಮಾಡಿದ್ದು, ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದರು.












































