ಯಶ್ ಅಭಿನಯದ ‘ರಾಮಾಯಣ ಭಾಗ-1’ ಬಿಡುಗಡೆ ದಿನಾಂಕ ಘೋಷಣೆ: ಇಲ್ಲಿದೆ ವಿವರ

Picture of Savistara

Savistara

Bureau Report

ಮುಂಬೈ: ರಾಕಿಂಗ್ ಸ್ಟಾರ್ ಯಶ್, ಬಾಲಿವುಡ್ ನಟ ರಣಬೀರ್ ಕಪೂರ್, ಬಹುಭಾಷಾ ನಟಿ ಸಾಯಿ ಪಲ್ಲವಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ‘ರಾಮಾಯಣ’ ಸಿನಿಮಾದ ಮೊದಲ ಭಾಗದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿರುವ ‘ದಿ ವರ್ಲ್ಡ್ ಆಫ್ ರಾಮಾಯಣ’ ಖಾತೆಯಲ್ಲಿ ಸಿನಿಮಾ ಬಿಡುಗಡೆ ಕುರಿತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.’ನವರಾತ್ರಿಯ ಈ ಶುಭ ಸಂದರ್ಭದಲ್ಲಿ ನಾವು ಒಂದು ಹೊಸ ಯುಗದ ಆರಂಭವನ್ನು ಸಂಭ್ರಮಿಸುತ್ತಿದ್ದೇವೆ. ಅದು ರಾಮನ ಯುಗದ ಆರಂಭ. ನಮಿತ್ ಮಲ್ಲೋತ್ರಾ ಅವರ ‘ರಾಮಾಯಣ ಭಾಗ-1′ ವಿಶ್ವದಾದ್ಯಂತ ನವೆಂಬರ್ 5ರಂದು ತೆರೆ ಮೇಲೆ ಬರಲಿದೆ’ ಎಂದು ತಿಳಿಸಲಾಗಿದೆ.ಹಾಗೆಯೇ, ‘ಸಿನಿಮಾದ ಮುಂಗಡ ಟಿಕೆಟ್ ಬುಕಿಂಗ್ ದಸರಾ ದಿನದಂದು ಆರಂಭವಾಗಲಿದೆ’ ಎಂದೂ ಮಾಹಿತಿ ನೀಡಿದೆ.

ಸಿನಿಮಾದಲ್ಲಿ ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಅವರು ರಾಮ-ಸೀತೆಯ ಪಾತ್ರದಲ್ಲಿ ನಟಿಸಿದ್ದಾರೆ. ಲಕ್ಷ್ಮಣನಾಗಿ ರವಿ ದುಬೇ, ಹನುಮಂತನಾಗಿ ಸನ್ನಿ ಡಿಯೋಲ್ ಕಾಣಿಸಿಕೊಳ್ಳುತ್ತಿದ್ದಾರೆ. ರಾವಣನ ಪಾತ್ರಕ್ಕೆ ಯಶ್ ಜೀವ ತುಂಬಿದ್ದಾರೆ.ಬಹುನಿರೀಕ್ಷಿತ ಈ ಸಿನಿಮಾವನ್ನು ನಿತೇಶ್ ತಿವಾರಿ ನಿರ್ದೇಶಿಸಿದ್ದು, ಎರಡು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಡಿಎನ್‌ಇಜಿ ಹಾಗೂ ಯಶ್ ಅವರ ‘ಮಾನ್‌ಸ್ಟ‌ರ್ ಮೈಂಡ್ ಕ್ರಿಯೇಷನ್ಸ್’ ಸಹಯೋಗದಲ್ಲಿ ನಮಿತ್ ಮಲ್ಲೋತ್ರಾ ಅವರ ‘ಪ್ರೈಂ ಫೋಕಸ್ ಸ್ಟುಡಿಯೊ ಸಿನಿಮಾಗೆ ಆರ್ಥಿಕ ಇಂಧನ ಒದಗಿಸಿದೆ.ಮೊದಲ ಆವೃತ್ತಿಯು ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಎರಡನೇ ಭಾಗ 2027ರ ದೀಪಾವಳಿಗೆ ತೆರೆ ಮೇಲೆ ಬರುವ ಸಾಧ್ಯತೆ ಇದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!