ಮಂಗಳೂರು, ಆ.15: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ 2025-26 ನೇ ಸಾಲಿಗೆ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತಕಲೆಗಳು, ಸಮಾಜಸೇವೆ, ಜಾನಪದ, ಪರಿಸರ-ವಿಜ್ಞಾನ, ವೈದ್ಯಕೀಯ, ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಅರ್ಜಿಯನ್ನು ತಮ್ಮ ಸೇವೆ/ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ, ವಿವರಣೆಗಳೊಂದಿಗೆ .24 ರೊಳಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ನೀಡಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.










































