ಈ ತಿಂಗಳು ವಿಶೇಷ ಲೋಕಸಭಾ ಅಧಿವೇಶನ ಸಾಧ್ಯತೆ |ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಸಿದ್ಧತೆ

Picture of Savistara

Savistara

Bureau Report

ಹೊಸ ದಿಲ್ಲಿ: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಿರೋಧ ಪಕ್ಷಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿರುವ ಬೆನ್ನಿಗೇ, ಈ ತಿಂಗಳಾಂತ್ಯದಲ್ಲಿ ಕೇಂದ್ರ ಸರಕಾರ ವಿಶೇಷ ಲೋಕಸಭಾ ಅಧಿವೇಶನ ಆಯೋಜಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ಅಧಿವೇಶನದಲ್ಲಿ ಸಾಂವಿಧಾನಿಕ ತಿದ್ದುಪಡಿಗೆ ಸಂಬಂಧಿಸಿದ ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆಯಾಗಲಿದೆ ಎನ್ನಲಾಗಿದೆ.ಪ್ರಸ್ತಾವಿತ ಮಸೂದೆಗಳು ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲಿವೆ ಎಂಬ ವಿಶ್ವಾಸದಲ್ಲಿ ಕೇಂದ್ರ ಸರಕಾರವಿದೆ. ಈ ಮಸೂದೆಗಳು ಸಂಭವನೀಯ ಮತಕ್ಕೆ ಹೋಗುವುದಕ್ಕೂ ಮುನ್ನ ಈ ಮಸೂದೆಗಳಿಗೆ ವಿರೋಧ ಪಕ್ಷಗಳ ಬೆಂಬಲ ಪಡೆಯಲು ಕೇಂದ್ರ ಸರಕಾರ ಮುಂದಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಎಪ್ರಿಲ್ 17ರ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮಂಡಿಸಿದ್ದ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಹಾಗೂ ಮಹಿಳಾ ಮೀಸಲಾತಿ ಮಸೂದೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ತಿರಸ್ಕೃತಗೊಂಡು ಕೇಂದ್ರ ಸರಕಾರಕ್ಕೆ ಮುಖಭಂಗವಾಗಿತ್ತು. ಇದರ ಬೆನ್ನಿಗೇ, ಈ ಪ್ರಸ್ತಾವಿತ ನಡೆಗೆ ಕೇಂದ್ರ ಸರಕಾರ ಮುಂದಾಗಿದೆ.ಈ ಮಸೂದೆಗಳನ್ನು ಕೇಂದ್ರ ಸರಕಾರ ಮುಂಗಾರು ಅಧಿವೇಶನದಲ್ಲಿ ಮಂಡಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ, ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುಂದೂಡಿತ್ತು ಎಂದು ಹೇಳಲಾಗಿದೆ.

[t4b-ticker]
error: Content is protected !!