ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ -ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

Picture of Savistara

Savistara

Bureau Report

ಪುತ್ತೂರು: ತುಳುನಾಡಿನ ಜನರು ಪಶು, ಪಕ್ಷಿ ಹಾಗೂ ಪ್ರಕೃತಿಯಲ್ಲಿ ದೇವರು ಮತ್ತು ದೈವತ್ವವನ್ನು ಕಾಣುತ್ತಾರೆ. ಯಕ್ಷಗಾನ, ಕಂಬಳ, ಹುಲಿವೇಷದಂತಹ ಸಾಂಪ್ರದಾಯಿಕ ಕಲೆಗಳು ಒಂದೊಂದು ಸಂದೇಶವನ್ನು ಸಾರುತ್ತವೆ. ಕಲೆ ಮತ್ತು ಭಕ್ತಿಯ ಸಂಗಮವಾಗಿರುವ ಹುಲಿವೇಷದ ಮೂಲಕ ಯುವಜನತೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಅರಿವು ಮೂಡಿಸುವುದರ ಜತೆಗೆ ಸಮಾಜದಲ್ಲಿ ಒಗ್ಗಟ್ಟು ಬೆಳೆಸಲು ಹುಲಿವೇಷ ಸ್ಪರ್ಧೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶನಿವಾರ ವಿಜಯ ಸಾಮ್ರಾಟ್ ಸಂಘಟನೆಯ ವತಿಯಿಂದ ಆಯೋಜಿಸಲಾದ ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4 ಅನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.ವಿಜಯ ಸಾಮ್ರಾಟ್ ಸಂಘಟನೆಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ಮಾತನಾಡಿ, ಸಾಮಾಜಿಕ ಸೇವೆಯ ಉದ್ದೇಶದಿಂದ ಆರಂಭಗೊಂಡ ಸಂಘಟನೆಯು ಈಗಾಗಲೇ ನಾಲ್ಕು ಬಡ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿಕೊಟ್ಟಿದೆ. ಇದೀಗ ಕರಾವಳಿಯ ಸಾಂಪ್ರದಾಯಿಕ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಹುಲಿವೇಷ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಪುತ್ತೂರಿನ ಪ್ರಜ್ಞಾ ಆಶ್ರಮದ ಅಣ್ಣಪ್ಪ-ಜ್ಯೋತಿ ದಂಪತಿಯನ್ನು ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಸನ್ಮಾನಿಸಿದರು. ಬಳಿಕ

ಗಣ್ಯರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಸಮಾರಂಭದಲ್ಲಿಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ್ ಭಟ್, ಹಿರಿಯ ವೈದ್ಯ ಡಾ. ಎಂ.ಕೆ. ಪ್ರಸಾದ್ ಭಂಡಾರಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸಮಿತಿ ಸದಸ್ಯರಾದ ಸುಭಾಷ್ ರೈ ಬೆಳ್ಳಿಪಾಡಿ ಮತ್ತು ವಿನಯ ಸುವರ್ಣ, ಪುಣಚ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾರಪ್ಪ ಶೆಟ್ಟಿ, ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಚನಿಲ ತಿಮ್ಮಪ್ಪ ಶೆಟ್ಟಿ, ಸುದೇಶ್ ಚಿಕ್ಕಪುತ್ತೂರು ಹಾಗೂ ಮಹೇಶ್ ವಳಕುಂಜ ಸೇರಿದಂತೆ ಹಲವು ಗಣ್ಯರು.ವಿಜಯ ಸಾಮ್ರಾಟ್ ಸಂಘಟನೆ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪದಾಧಿಕಾರಿಗಳಾದ ನಾಗರಾಜ್ ನಡುವಡ್ಕ, ಶರತ್ ಆಳ್ವಾ ಕೂರೇಲು, ರತನ್ ರೈ ಕುಂಬ್ರ ಹಾಗೂ ರಾಜೇಶ್ ರೈ ಪರ್ಪುಂಜ ಪಡೆದರು.

News Updates

ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ -ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

[t4b-ticker]
error: Content is protected !!