ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ರಹಸ್ಯ ಆಪರೇಷನ್: ಸೈಬರ್ ಪೊಲೀಸರ ಬಲೆಗೆ ಬಿದ್ದ ಖಾಸಗಿ ಚಾನೆಲ್ ಮುಖ್ಯಸ್ಥ!

Picture of Savistara

Savistara

Bureau Report

‘ಸ್ಟಿಂಗ್’ ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ತೀವ್ರಗೊಳಿಸಿರುವ ಬೆಂಗಳೂರು ನಗರ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು, ಖಾಸಗಿ ಸುದ್ದಿ ವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

​ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಕಳೆದ ನಾಲ್ಕು ದಿನಗಳಿಂದ ತಂಗಿದ್ದ ರಾಕೇಶ್ ಶೆಟ್ಟಿ ಅವರನ್ನು ಪೊಲೀಸರು ಬುಧವಾರ ರಾತ್ರಿಯೇ ವಶಕ್ಕೆ ಪಡೆದು, ಗುರುವಾರ ಮುಂಜಾನೆ ನಗರಕ್ಕೆ ಕರೆತಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವಿಚಾರಣೆ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದ್ದು, ಮುಂದಿನ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಲಾಗಿದೆ.​

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ:​ಪೊಲೀಸರ ಈ ಅನಿರೀಕ್ಷಿತ ಕ್ರಮದ ಬೆನ್ನಲ್ಲೇ ಎಚ್ಚೆತ್ತಿರುವ ರಾಕೇಶ್ ಶೆಟ್ಟಿ, ಬಂಧನದಿಂದ ಬಚಾವಾಗಲು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ಸಂಬಂಧ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ ಸಿಸಿಎಚ್‌ ಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ. ಕಳೆದ ಒಂದು ವಾರದಿಂದ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆ ಹಾಗೂ ಮಾಹಿತಿಗಳನ್ನು ಕಲೆಹಾಕುತ್ತಿದ್ದ ಸೈಬರ್ ಪೊಲೀಸರು, ಸದ್ಯ ತನಿಖೆಯನ್ನು ಚುರುಕುಗೊಳಿಸಿದ್ದಾರೆ.​

ಎಚ್‌.ಡಿ.ಕುಮಾರಸ್ವಾಮಿ ಗಡವು ಹಾಗೂ ಪ್ರತಿಭಟನೆ:​ಈ ‘ಸ್ಟಿಂಗ್’ ಆಪರೇಷನ್ ಪ್ರಕರಣದ ಪ್ರಮುಖ ಆರೋಪಿ ರಾಕೇಶ್ ಶೆಟ್ಟಿ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ನಗರ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಗಡುವು ಸಹ ನೀಡಿದ್ದರು. ಇದೇ ಪ್ರಕರಣದಲ್ಲಿ ಇನ್ನೂ ಇಬ್ಬರ ಪಾತ್ರವಿರುವ ಬಗ್ಗೆಯೂ ಅವರು ಗಂಭೀರ ಆರೋಪ ಮಾಡಿದ್ದರು.​

ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಈ ಪ್ರಕರಣದಲ್ಲಿ ಪೊಲೀಸರ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬರುವ ಸಾಧ್ಯತೆಯಿದೆ.

News Updates

ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ -ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

[t4b-ticker]
error: Content is protected !!