ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಹೇಳಿಕೆಗೆ ಸಂಬಂಧಿಸಿದ 2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರದ ವಿಶೇಷ ಎಂಪಿ/ಎಂಎಲ್‌ಎ ನ್ಯಾಯಾಲಯವು ಸೋಮವಾರ ಖುಲಾಸೆಗೊಳಿಸಿದೆ.2018ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅಮಿತ್ ಶಾ ಕುರಿತು ರಾಹುಲ್ ಗಾಂಧಿ ನೀಡಿದ್ದರೆನ್ನಲಾದ ಹೇಳಿಕೆಗೆ ಸಂಬಂಧಿಸಿ ಬಿಜೆಪಿ ನಾಯಕ, ಸುಲ್ತಾನ್‌ಪುರ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ವಿಜಯ್ ಮಿಶ್ರಾ ದೂರು ದಾಖಲಿಸಿದ್ದರು.2018ರ ಆಗಸ್ಟ್ 4ರಂದು ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ದೂರು ಸಲ್ಲಿಸಿದ್ದರು.
ಅಮಿತ್ ಶಾ ವಿರುದ್ಧದ ಮಾನಹಾನಿ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ
Savistara
Bureau Report
[t4b-ticker]












































