ಪ್ರಧಾನಿ ಮೋದಿ ವಿರುದ್ಧದ ಹೇಳಿಕೆ : ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

Picture of Savistara

Savistara

Bureau Report

ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಕಲಬುರಗಿ ಮಹಾನಗರ ಮತ್ತು ಗ್ರಾಮಾಂತರ ಜಿಲ್ಲಾ ಘಟಕಗಳು ಆಗ್ರಹಿಸಿವೆ.ಈ ಕುರಿತು ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿರುವ ಬಿಜೆಪಿ ಮುಖಂಡರು, ವಿರೋಧ ಪಕ್ಷದ ನಾಯಕರಂತಹ ಉನ್ನತ ಸ್ಥಾನದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿಗಳ ಕುರಿತು ಅಸಂಬದ್ಧ ಪದಗಳನ್ನು ಬಳಸಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.ಪ್ರಧಾನಿ ಮೋದಿ ಅವರ ಕುರಿತು ನೀಡಿರುವ ಹೇಳಿಕೆಯನ್ನು ಹಿಂಪಡೆದು, ಖರ್ಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಬಿಜೆಪಿ ವತಿಯಿಂದ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಎಂಎಲ್ಸಿಎನ್ ರವಿಕುಮಾ‌ರ್,ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಗರಾಧ್ಯಕ್ಷ ಚಂದು ಪಾಟೀಲ್‌, ಶಾಸಕರಾದ ಬಿಜಿ ಪಾಟೀಲ್,ಶಶೀಲ್ ನಮೋಶಿ,ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲಕೂರ ಸೇರಿದಂತೆ ಇತರರು ಉಪಸ್ಥಿತರಿದ್ದರು

[t4b-ticker]
error: Content is protected !!