ಬೆಂಗಳೂರು: ಕರ್ನಾಟಕದ 4 ವಿಧಾನ ಪರಿಷತ್ ಕ್ಷೇತ್ರಗಳ ಮತ ಎಣಿಕೆ ಮುಕ್ತಾಯಗೊಂಡಿದ್ದು, ಎನ್‌ಡಿಎ ಮೈತ್ರಿಕೂಟ ಎಲ್ಲಾ 4 ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ. ಮೈತ್ರಿಕೂಟದ ಪೈಕಿ ಬಿಜೆಪಿ 3 ಹಾಗೂ ಜೆಡಿಎಸ್ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ.
ಕ್ಷೇತ್ರವಾರು ವಿಜೇತರ ವಿವರ:
ಬೆಂಗಳೂರು ಶಿಕ್ಷಕರ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಎಪಿ ರಂಗನಾಥ್ 10,810 ಮತಗಳನ್ನು ಪಡೆದು, ಕಾಂಗ್ರೆಸ್‌ನ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿಯ ಶಶೀಲ್ ಜಿ ನಮೋಶಿ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ್ ವಿರುದ್ಧ ಗೆದ್ದು, 5ನೇ ಬಾರಿಗೆ ಪುನರಾಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರ: ಬಿಜೆಪಿಯ ಎಸ್‌ವಿ ಸಂಕನೂರ ಕಾಂಗ್ರೆಸ್‌ನ ಮೋಹನ್ ಲಿಂಬಿಕಾಯಿ ಅವರನ್ನು ಪರಾಭವಗೊಳಿಸಿ ಗೆಲುವು ಸಾಧಿಸಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರ: ಬಿಜೆಪಿಯ ಕೆಎಂ ಸುರೇಶ್ ಕಾಂಗ್ರೆಸ್‌ನ ಶಶಿ ಹುಲಿಕುಂಟೆಮಠ ಅವರನ್ನು ಸೋಲಿಸಿ ವಿಜಯ ಸಾಧಿಸಿದ್ದಾರೆ.
ಮತ ಎಣಿಕೆ:ಅಕ್ಟೋಬರ್ 23 ರಂದು ಮತದಾನ ನಡೆದಿದ್ದು, ಅಕ್ಟೋಬರ್ 27ರಂದು ಆರಂಭಗೊಂಡ ಬ್ಯಾಲೆಟ್ ಪೇಪರ್ ಮತ ಎಣಿಕೆಯು ಮಧ್ಯರಾತ್ರಿ ಹಾಗೂ ಬೆಳಗಿನ ಜಾವದವರೆಗೆ ನಡೆದು ಅಂತಿಮ ಫಲಿತಾಂಶ ಹೊರಬಿದ್ದಿದೆ.











































