ವಿಧಾನ ಪರಿಷತ್‌ ಚುನಾವಣೆ ಫಲಿತಾಂಶ | ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Picture of Savistara

Savistara

Bureau Report

ಮಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಗೆಲ್ಲಿಸುವ ಮೂಲಕ ರಾಜ್ಯದ ಶಿಕ್ಷಕರು ಹಾಗೂ ಪದವೀಧರ ಮತದಾರರು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.ದೇಶದಲ್ಲಿ ಇವಿಎಂ ಮೇಲೆ ಸದಾ ಗೂಬೆ ಕೂರಿಸುವ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರಿಗೆ ಈ ಫಲಿತಾಂಶವು ಕಣ್ಣು ತೆರೆಸಬೇಕಾಗಿದೆ. ಈ ಚುನಾವಣೆ ನಡೆದಿರುವುದು ಬ್ಯಾಲಟ್ ಪೇಪರ್ ಮೂಲಕ ಎನ್ನುವುದನ್ನು ಕಾಂಗ್ರೆಸ್‌ನವರು ಮರೆಯಬಾರದು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದ್ದು, ಆಡಳಿತಾರೂಢ ಕಾಂಗ್ರೆಸ್‌ನ ದುರಾಡಳಿತದ ಬಗ್ಗೆ ರಾಜ್ಯದ ಜನತೆ ಎಷ್ಟೊಂದು ಬೇಸತ್ತು ಹೋಗಿದ್ದಾರೆ ಎನ್ನುವುದಕ್ಕೆ ನೇರ ಸಾಕ್ಷಿ.

ಇಷ್ಟಾದ ಮೇಲೆಯೂ ರಾಹುಲ್ ಗಾಂಧಿ ಮತಪತ್ರಗಳನ್ನು ಅಥವಾ ಪ್ರಜ್ಞಾವಂತ ಮತದಾರರನ್ನೇ ನಿಂದಿಸುತ್ತಾರೆಯೇ? ನಾಟಕೀಯ ರಾಜಕೀಯದ ಮೂಲಕ ಕಾಂಗ್ರೆಸ್ ತನ್ನ ಪತನವನ್ನು ಮುಚ್ಚಿಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರ ಅಸ್ತಿತ್ವ ರಾಜ್ಯದಲ್ಲಾಗಲಿ, ದೇಶದಲ್ಲಾಗಲಿ ಎಲ್ಲೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ‘ವಿಕಸಿತ ಭಾರತ- 2047’ರ ಕನಸನ್ನು ಸಾಕಾರಗೊಳಿಸುವಲ್ಲಿ ನಂಬಿಕೆಯಿಟ್ಟು, ರಾಜ್ಯದ ಪ್ರಬುದ್ಧ ಮತದಾರರು, ಚಿಂತಕರ ಚಾವಡಿಯಾದ ವಿಧಾನ ಪರಿಷತ್ತಿಗೆ ಸೂಕ್ತ ಹಾಗೂ ಅರ್ಹರಾದ ಎನ್.ಡಿ.ಎ ಅಭ್ಯರ್ಥಿಗಳನ್ನು ಆರಿಸಿ ಕಳುಹಿಸಿದ್ದಾರೆ.

“ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬರೀ ಗ್ಯಾರಂಟಿಗಳ ನೆಪ ಹೇಳಿ ರಾಜ್ಯದ ಖಜಾನೆಯನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ. ಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಲು ‘ಸರ್ಕಾರದಲ್ಲಿ ದುಡ್ಡೇ ಇಲ್ಲ’ ಎಂದು ಕೈಚೆಲ್ಲಿ ಕುಳಿತುಕೊಳ್ಳುವ ಶೋಚನೀಯ ಪರಿಸ್ಥಿತಿಗೆ ಸಿಎಂ ಡಿಕೆ ಶಿವಕುಮಾರ್‌ ಅವರು ತಲುಪಿದ್ದಾರೆ.

ದೇಶದ ಆರ್ಥಿಕ ಪ್ರಗತಿಯ ಎಂಜಿನ್ ಆಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ತನ್ನ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಆರ್ಥಿಕ ಅರಾಜಕತೆಗೆ ತಳ್ಳಿದೆ. ಕಾಂಗ್ರೆಸ್ಸಿನ ಅಪಪ್ರಚಾರ, ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಿರಂತರ ದಾಳಿ ಹಾಗೂ ರಾಜ್ಯದ ಬೊಕ್ಕಸ ಲೂಟಿ ಹೊಡೆದಿದ್ದಕ್ಕೆ ಶಿಕ್ಷಿತ ಸಮಾಜ ನೀಡಿರುವ ಸರಿಯಾದ ಉತ್ತರವೇ ಈ ಚುನಾವಣಾ ಫಲಿತಾಂಶ” ಎಂದು ಕ್ಯಾ.ಚೌಟ ಅಭಿಪ್ರಾಯಪಟ್ಟಿದ್ದಾರೆ.

“ಈ ಜನವಿರೋಧಿ, ಅಸಮರ್ಥ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆಯುವುದೊಂದೇ ಕರ್ನಾಟಕವನ್ನು ಮರಳಿ ಅಭಿವೃದ್ಧಿಯ ಹಾದಿಗೆ ತರಲು ಇರುವ ಏಕೈಕ ಮಾರ್ಗವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲ ಪ್ರಜ್ಞಾವಂತ ಮತದಾರರು ಈಗಲೇ ಎಚ್ಚೆತ್ತುಕೊಂಡು ಮುಂದಿನ ಚುನಾವಣೆಗಳಲ್ಲಿ ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಕಳೆದುಕೊಂಡಿರುವ ಈ ಭ್ರಷ್ಟ ಕಾಂಗ್ರೆಸ್‌ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ತಿಳಿಸಿದ್ದಾರೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!