ರಾಜ್ಯದಲ್ಲಿ ಶುರುವಾಯ್ತು ಚಳಿ: ಬಯಲು ಸೀಮೆಯಲ್ಲಿ 12.8 ಡಿಗ್ರಿಗೆ ಕುಸಿದ ತಾಪಮಾನ| ಇಲ್ಲಿದೆ ಕಂಪ್ಲೀಟ್ ವೆದರ್ ರಿಪೋರ್ಟ್!

Picture of Savistara

Savistara

Bureau Report

ರಾಜ್ಯದಲ್ಲಿ ಸದ್ಯ ಒಣ ಹವಾಮಾನ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಚಳಿಯ ಅನುಭವ ಹೆಚ್ಚಾಗಿದೆ.

ಮುಂದಿನ ಎರಡು ದಿನಗಳಲ್ಲೂ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನವೇ ಮುಂದುವರಿಯುವ ಮುನ್ಸೂಚನೆ ಇದೆ. ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದೆ.ರಾಜ್ಯದಲ್ಲಿ ದಾಖಲಾದ ಹವಾಮಾನ ಮಾಹಿತಿಯ ಪ್ರಕಾರ, ದಾವಣಗೆರೆ ಬಯಲು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ 12.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮತ್ತೊಂದೆಡೆ, ಉತ್ತರ ಕನ್ನಡದ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 36.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾದ ಪ್ರದೇಶವಾಗಿದೆ.

ಅಕ್ಟೋಬರ್ 29ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದ‌ರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!